ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿಸದಿದ್ದರೆ ಪ್ಯಾನ್ಕಾರ್ಡ್ ನಿಷ್ಕ್ರೀಯವಾಗಲಿದೆ : ಆದಾಯ ತೆರಿಗೆ ಇಲಾಖೆ ಎಚ್ಚರಿಕೆ

ದೆಹಲಿ: ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ಪ್ಯಾನ್ ಕಾರ್ಡ್ ನಿಷ್ಕ್ರೀಯವಾಗಲಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ತಿಳಿಸಿದೆ. 2023 ಮಾರ್ಚ್ 31ರೊಳಗೆ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿಸಬೇಕು. ಲಿಂಕ್ ಮಾಡದವರಿಗೆ ಈಗಾಗಲೇ 1000ರೂ ದಂಡವನ್ನು ವಿಧಿಸಲಾಗುತ್ತಿದೆ.

ಕನ್ನಡಾಂಬೆ ಭುವನೇಶ್ವರಿ ದೇವಿ ಚಿತ್ರ ಅಧಿಕೃತವಾಗಿ ಜಾರಿಗೆ ತರಲು ಒಪ್ಪಿದ ಸರ್ಕಾರ

ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಲು ಮಂಡಳಿಯು ಹಲವು ಬಾರಿ ಗಡುವು ವಿಸ್ತರಣೆ ಮಾಡಿದೆ. ಈ ಅವಧಿಯೊಳಗೆ ಎರಡು ಕಾರ್ಡ್ ಗಳ ಲಿಂಕ್ ಮಾಡದಿದ್ದಲ್ಲಿ ದಂಡ ವಿಧಿಸಲಾಗುವುದು ಮತ್ತು 2023ರ ಮಾರ್ಚ್ 31ರ ಬಳಿಕ ಈ ಅವಕಾಶವೂ ಇಲ್ಲದಂತಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಆದಾಯ ತೆರಿಗೆ ಕಾಯ್ದೆ 1961ರ ಪ್ರಕಾರ, ವಿನಾಯಿತಿ ಪಡೆದ ವರ್ಗದಲ್ಲಿ ಬರದ ಎಲ್ಲಾ ಪ್ಯಾನ್ ಹೊಂದಿರುವವರಿಗೆ ಆಧಾರ್​ನೊಂದಿಗೆ ಲಿಂಕ್ ಮಾಡಲು ಕೊನೆಯ ದಿನಾಂಕ 2023 ಮಾರ್ಚ್ 31ಕೊನೆಯ ದಿನವಾಗಿದೆ. ಈ ವಿಚಾರವಾಗಿ ಆದಾಯ ತೆರಿಗೆ ಇಲಾಖೆ ಟ್ವೀಟ್ ಮಾಡಿ ಎಚ್ಚರಿಸಿದೆ.

ಚಳಿಗಾಲದಲ್ಲಿ ತ್ವಚೆಯ ಆರೈಕೆ ಹೀಗೆ ಮಾಡಿ..

About The Author