- Advertisement -
ಬಳ್ಳಾರಿ: ಬಳ್ಳಾರಿಯ ಮಾಜಿ ಸಂಸದ ಕೊಳೂರು ಬಸವನಗೌಡ (88) ವಯೋಸಹಜ ಕಾಯಿಲೆಯಿಂದ ಇಂದು ಮೃತಪಟ್ಟಿದ್ದಾರೆ. ಲಿಂಗಾಯತ ಸಮುದಾಉದ ಹಿರಿಯ ಮುಖಂಡರಾಗಿದ್ದ ಬಸವನಗೌಡ ಅವರು ಕಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. 2000ರಲ್ಲಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆ ಆಗಿದ್ದರು. ಬಳ್ಳಾರಿಯ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೆರಲಿದೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಇಂದು ಇಬ್ಬರು ಕಾಂಗ್ರೆಸ್ ನಾಯಕರು ಸಾವನ್ನಪ್ಪಿದ್ದಾರೆ. ಶ್ರೀಶೈಲಪ್ಪ ಬಿರೂರು ಅವರು ಮೃತಪಟ್ಟ ಬೆನ್ನಲ್ಲೆ ಇವರು ವಿಧಿವಶರಾಗಿದ್ದಾರೆ.
ಅನುಮತಿ ಇಲ್ಲದೆ ಅಮಿತಾಬ್ ಬಚ್ಚನ್ ಧ್ವನಿ, ಚಿತ್ರ ಬಳಸುವಂತಿಲ್ಲ : ಹೈಕೋರ್ಟ್ ತೀರ್ಪು
- Advertisement -