Saturday, April 19, 2025

Latest Posts

ಕರ್ನಾಟಕದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ 10 ಪ್ರತ್ಯೇಕ ಕಾಲೇಜು ನಿರ್ಮಾಣ

- Advertisement -

ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಉಡುಪಿಯಲ್ಲಿ ಹಿಜಾಬ್ ವಿವಾದ ನಡೆದ ಬಳಿಕ  ಸರ್ಕಾರ ಪ್ರತ್ಯೇಕ ಕಾಲೇಜು ನಿರ್ಮಿಸಲು ಮುಂದಾಗಿದ್ದು, ಪ್ರತಿ ಕಾಲೇಜಿಗೆ 2.50 ಕೋಟಿ ರೂಪಾಯಿ ಅನುದಾನವನ್ನು ಮೀಸಲಿರಿಸಲಾಗಿದೆ. ವಕ್ಫ ಬೋರ್ಡ್ ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿಈ ವೆಚ್ಚವನ್ನು ಭರಿಸಲು ನಿರ್ಧರಿಸಿದೆ. ಮುಂದಿನ ತಿಂಗಳು ಮುಸ್ಲಿಂ ವಿದ್ಯಾರ್ಥಿನಿಯರಿಗಾಗಿ ಪ್ರತ್ಯೇಕ ಕಾಲೇಜು ಯೋಜನೆಗೆ ಶಂಕುಸ್ಥಾಪನೆ ಮಾಡಲಾಗುತ್ತದೆ ಮತ್ತು ಉದ್ಘಾಟನೆಗೆ ಸಿಎಂ ಅವರಿಗೆ ಆಹ್ವಾನ ನೀಡಲಾಗಿದೆ.

ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ ನಿಧನ

ತರಗತಿಯಲ್ಲಿ ಹಿಜಾಬ್ ಧರರಿಸದಂತೆ ಸರ್ಕಾರ ಆದೇಶ ಹೊರಡಿಸಿದ ನಂತರ ಕೆಲವು ಮುಸ್ಲಿಂ ಸಂಘ, ಸಂಸ್ಥೆಗಳು ಸರ್ಕಾರಸ ವಿರುದ್ಧ ತಿರುಗಿ ಬಿದ್ದಿದ್ದವು. ಆದರೆ ಈಗ ಚುನಾವಣೆ ಆಗಮಿಸುತ್ತಿದ್ದಂತೆ ಸರ್ಕಾರವೇ ಮುಂದಾಗಿ ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಿಸಲು ನಿರ್ಧರಿಸಿದೆ.  ರಾಜ್ಯದ ದಕ್ಷಿಣ ಕನ್ನಡದ ಅಡ್ಯಾರ್ ಕಣ್ಣೂರಿನಲ್ಲಿ , ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕರ್ನಾಟಕ ಸೇರಿದಂತೆ ಹತ್ತು ಕಡೆ ಕಾಲೇಜು ನಿರ್ಮಿಸಲು ಮುಂದಾಗಿದೆ ಎಂದು ವಕ್ಫ ಬೋರ್ಡ್ ಅಧ್ಯಕ್ಷ ಶಫಿ ಸಾ ಅದಿ ತಿಳಿಸಿದ್ದಾರೆ.

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ವಿಧಿವಶ

ಸಾಲ ವಾಪಸ್ ಕೇಳಿದ್ದಕ್ಕೆ ಬಿಜೆಪಿ ಮುಖಂಡನಿಂದ ಹಲ್ಲೆ ಆರೋಪ..?

- Advertisement -

Latest Posts

Don't Miss