Wednesday, October 15, 2025

Latest Posts

ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ ನಿಧನ

- Advertisement -

ಮಂಗಳೂರು: ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ (88) ಅವರು ಸಾವನ್ನಪ್ಪಿದ್ದಾರೆ. ಸುಂದರ್ ರಾವ್ ಅವರು ಯಕ್ಷಗಾನದ ಪ್ರವೀಣರಾಗಿದ್ದರು ಮತ್ತು ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಮಾರ್ಚ್ 20, 19934ರಲ್ಲಿ ಕೇರಳದ ಕುಂಬಳೆಯಲ್ಲಿ ಸುಂದರ್ ಅವರು ಜಿನಿಸಿದ್ದರು. 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳದಲ್ಲಿ ಕಲಾವಿದರಾಗಿ ಇವರು ಸೇವೆ ಸಲ್ಲಿಸಿದ್ದಾರೆ.

ಕರ್ನಾಟಕದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ 10 ಪ್ರತ್ಯೇಕ ಕಾಲೇಜು ನಿರ್ಮಾಣ

ಯಕ್ಷಗಾನ ಕಲಾವಿದರಾಗಿ ಮತದಾರರಿಂದ ನೇರವಾಗಿ ಆರಿಸಲ್ಪಟ್ಟ ಪ್ರಥಮ ಶಾಸಕರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ಸುಂದರ್ ರಾವ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಪಿ.ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದಿಂದ 2018-2019ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ ಸೇರಿ ಅನೇಕ ಪ್ರಶಸ್ತಿಗಳು ಲಭಿಸಿವೆ. ಇವರು ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಇವರ ಮನೆಯಲ್ಲಿ ಸಾರ್ವಜನಿಕರಿಗೆ ವಿಕ್ಷಣೆಗೆ ಅವಕಾಶ ಮಾಡಿಕೊಡಲಾಗಿದ್ದು, ಗುರುವಾರ ಅಂತ್ಯಕ್ರಿಯೆ ನಡೆಯಲಿದೆ.

ಸಾಲ ವಾಪಸ್ ಕೇಳಿದ್ದಕ್ಕೆ ಬಿಜೆಪಿ ಮುಖಂಡನಿಂದ ಹಲ್ಲೆ ಆರೋಪ..?

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ವಿಧಿವಶ

- Advertisement -

Latest Posts

Don't Miss