ಬೆಂಗಳೂರು: ಸರ್ಕಾರ ವಿದ್ಯಾರ್ಥಿಗಳ ಸಮಸ್ಯೆಯನ್ನು ಪರಿಹರಿಸುವಲ್ಲಿ ವಿಫಲವಾಗಿದೆ, ಮೂಲ ಸೌಕರ್ಯಗಳ ಕೊರತೆ, ಉಚಿತ ಬಸ್ ಸೌಕರ್ಯ, ವಿದ್ಯಾರ್ಥಿ ವೇತನ, ವಿದ್ಯಾರ್ಥಿ ನಿಲಯ, ಉಪನ್ಯಾಸಕರ ಕೊರತೆ, ಹಾಗೂ ವಿದ್ಯಾರ್ಥಿಗಳ ಪರೀಕ್ಷಾ ಪಲಿತಾಂಶಗಳನ್ನು ಸಹ ನೀಡದೆ ಸರ್ಕಾರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ.
‘ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದರೆ ಉಗ್ರ ಹೋರಾಟ ಮಾಡುತ್ತೇವೆ’
ಸರ್ಕಾರ ವಿದ್ಯಾರ್ಥಿಗಳ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ, ಆದ್ದರಿಂದ ದಿನಾಂಕ 17 ಡಿಸೆಂಬರ್ 2022 ರಂದು ರಾಜ್ಯಾದ್ಯಂತ ಎಲ್ಲಾ ಕಾಲೇಜುಗಳು ಬಂದ್ ಮತ್ತು ಪ್ರತಿಭಟನೆಗೆ ಚಾಲನೆ ನೀಡಲಾಯಿತು. ನಮ್ಮ ಬೇಡಿಕೆಗಳನ್ನು ಸರ್ಕಾರದ ಈಡೇರಿಸಬೇಕೆಂದು ಒತ್ತಾಯಿಸಿ ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ NSUI ರಾಜ್ಯಾಧ್ಯಕ್ಷರಾದ ಕೀರ್ತಿ ಗಣೇಶ್ ರವರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು.
ಅಂಜನಾದ್ರಿಯಲ್ಲಿ ಇಂದು ಹನುಮ ಮಾಲೆ ವಿಸರ್ಜನೆ
ಇದೇ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಮಾರುತಿ ಪ್ರಧಾನ ಕಾರ್ಯದರ್ಶಿಗಳಾದ ರಫೀಕ್ ಅಲಿ ಮತ್ತು ರಾಕೇಶ್, ಕಾರ್ಯದರ್ಶಿ ಮನ್ಮಂತ್, ಬೆಂಗಳೂರು ವಿಶ್ವವಿದ್ಯಾನಿಲಯ ಅಧ್ಯಕ್ಷ ಲಕ್ಷಯ ರಾಜ್, ಬೆಂಗಳೂರು ಜಿಲ್ಲಾಧ್ಯಕ್ಷ ಮಧು ಬೆಂಗಳೂರು ಗ್ರಾಮಾಂತರ ಅಧ್ಯಕ್ಷ ಮುಕೇಶ್ ಇನ್ನಿತರ NSUI ಪದಾಧಿಕಾರಿಗಳು ಹಾಜರಿದ್ದರು.
ಕರ್ನಾಟಕ ರಾಜ್ಯ ಕ್ರೀಡಾಕೂಟದ ರೈಪಲ್ ಶೂಟಿಂಗ್ ನಲ್ಲಿ, ರನ್ನರ್ ಅಪ್ ಚನ್ನವೀರಪ್ಪ ಗಾಮನಗಟ್ಟಿ!