ಹಾಸನ: ಸಕಲೇಶಪುರ ಪಟ್ಟಣದ ಪ್ಲಾಂಟರ್ಸ್ ಕ್ಲಬ್‌ನಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಕನ್ನಡಪರ ಸಂಘಟನೆಗಳು, ಕಾಫಿ ಬೆಳೆಗಾರರ ನಡುವೆ ಕಿತ್ತಾಟ ನಡೆದಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆಯಲ್ಲಿ ಸಭೆ ನಡೆಯುತ್ತಿದೆ. ಕೇವಲ ಕಾಫಿ ಪ್ಲಾಂಟರ್ಸ್ ಗೆ ಮಾತ್ರ ತೊಂದರೆ ಆಗಿಲ್ಲ ಈ ಭಾಗದ ಸಣ್ಣಪುಟ್ಟ ರೈತರುಗಳಿಗೆ ಕಾಡಾನೆಗಳಿಂದ ಹೆಚ್ಚು ಸಮಸ್ಯೆಯಾಗಿದೆ. 77 ಜನರು ಕಾಡಾನೆದಾಳಿಯಿಂದ ಸಾವನ್ನಪ್ಪಿದ್ದಾರೆ ಎಂಬ ವಿಷಯವನ್ನು ಸಭೆಯಲ್ಲಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪ್ರಸ್ತಾಪ ಮಾಡಿದ್ದಾರೆ.
ರೆಬಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ
ಈ ನಡುವೆ ಕಾಫಿ ಬೆಳೆಗಾರರು ಮಧ್ಯ ಪ್ರವೇಶ ಮಾಡಿದ್ದಾರೆ. ಕಾಫಿ ಬೆಳೆಗಾರರ ಸಂಘದ ಪದಾಧಿಕಾರಿಗಳ ನಡೆಗೆ ವಿರೋಧ ವ್ಯಕ್ತ ಪಡಿಸಿ ಸಭೆ ಬಹಿಷ್ಕರಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಹೊರ ನಡೆದಿದ್ದಾರೆ. ಮಾತು ಕೊಟ್ಟಂತೆ ಮುಖ್ಯಮಂತ್ರಿಗಳು ಮೊದಲು ಸಭೆ ನಡೆಸಲಿ.ಸಭೆ ನಡೆಸಲು ಸಕಲೇಶಪುರಕ್ಕೆ ಬರಬೇಕು ಎಂದು ಪಟ್ಟು ಹಿಡಿದು ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇಲ್ಲವಾದರೆ ಜನಸಂಕಲ್ಪ ಸಭೆಗೂ ಮುನ್ನ ಪ್ರತಿಭಟನೆ ಪ್ರಾರಂಭಿಸುವುದಾಗಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.
ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ನಾಳೆ ಸುಖವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ