Thursday, October 16, 2025

Latest Posts

ಅಭಿ- ಅವಿ ನಿಶ್ಚಿತಾರ್ಥಕ್ಕೆ ಶುಭಕೋರಿದ ಡಿಬಾಸ್ ಮತ್ತು ರಾಕಿಂಗ್ ಸ್ಟಾರ್ ಯಶ್

- Advertisement -

ಇಂದು ನಡೆದ ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಅವರ ಎಂಗೇಜ್ ಮೆಂಟ್ ಗೆ ಚಾಲೆಂಜಿಂಗ್ ಸ್ಟಾರ್  ದರ್ಶನ್  ಮತ್ತು ರಾಕಿಂಗ್ ದಂಪತಿ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಕೋರಿದರು. ಡಿಬಾಸ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್, ಜೋಡೆತ್ತು ಅನ್ನುವುದನ್ನು ಮಂಡ್ಯ ಲೋಕಸಭಾ ಚುನಾವಣೆಯಲ್ಲೇ ಪ್ರೂವ್ ಮಾಡಿದ್ದರು. ಇಬ್ಬರು ಕೂಡ ನನಗೆ ಮಕ್ಕಳು ಅಂತ ಸುಮಲತಾ ಅಂಬರೀಶ್ ಅವರು ಆಗಾಗ ಹೇಳುತ್ತಾನೆ ಇರುತ್ತಾರೆ. ಅದನ್ನ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥದಲ್ಲಿ ಇಬ್ಬರೂ ಸ್ಟಾರ್ ನಟರು ಮತ್ತೊಮ್ಮೆ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ನಿಶ್ಚಿತಾರ್ಥ ಮಾಡಿಕೊಂಡ ಕ್ಯೂಟ್ ಜೋಡಿಗೆ ರಾಕಿಂಗ್ ದಂಪತಿ ಅಭಿನಂದನೆ

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಅಭಿ ಮತ್ತು ಅವಿವಾ ನಶ್ಚಿತಾರ್ಥದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಪ್ರಮುಖ ಆಕರ್ಷಣೆ ಆಗಿದ್ದರು. ಇಬ್ಬರೂ ಮುಖಾಮುಖಿ ಆದಾಗ, ಅದೇ ನಗು, ಅದೇ ಸ್ನೇಹ, ಅದೇ ಆತ್ಮೀಯತೆ ಪರಸ್ಪರ ಅದೇ ಗೌರವ ಕಾಣಸಿತು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಪ್ತರ ಸಮ್ಮುಖದಲ್ಲಿ ಅಭಿಷೇಕ್‌ ಅಂಬರೀಶ್‌ ಮತ್ತು ಅವಿವಾ ಬಿದ್ದಪ್ಪ ಜೊತೆ ನಿಶ್ಚಿತಾರ್ಥ ನೆರವೇರಿದೆ. ಈ ವೇಳೆ ಅಭಿಷೇಕ್‌ ತಾಯಿ ಸುಮಲತಾ ಅಂಬರೀಶ್‌, ಅವಿವಾ ಅವರ ತಂದೆ-ತಾಯಿ ಹಾಗೂ ನಟ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಹಾಜರಿದ್ದು, ಜೋಡಿಗಳಿಗೆ ಶುಭಹಾರೈಸಿದರು. ಅವಿವಾ ಮತ್ತು ಅಭಿಷೇಕ್ ಹಲವು ವರ್ಷಗಳಿಂದ ಸ್ನೇಹಿತರಾಗಿದ್ದು, ಈ ಸ್ನೇಹ ಪ್ರೇಮಕ್ಕೆ ತಿರುಗಿ ಇದೀಗ ಜೊತೆಯಾಗಿ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅವಿವಾ ಕೂಡ ತಮ್ಮ ತಂದೆಯ ಹಾದಿಯಲ್ಲೇ ಸಾಗಿದ್ದು, ಫ್ಯಾಷನ್ ಲೋಕದಲ್ಲೇ ಕೆಲಸ ಮಾಡುತ್ತಿದ್ದಾರೆ. ಈ ಜೋಡಿಯ ಮದುವೆ ಮುಂದಿನ ವರ್ಷ ನಡೆಯಲಿದೆ ಎಂದು ತಿಳಿದುಬಂದಿದೆ.

ನಾಗ್ಪುರದಲ್ಲಿ ನಡೆದ ಸಮಾರಂಭದಲ್ಲಿ ಡೊಳ್ಳು ಬಾರಿಸಿದ ಪ್ರಧಾನಿ ಮೋದಿ

ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖವಿಂದರ್ ಸಿಂಗ್, ಅವರ ಉಪನಾಯಕರಾಗಿ ಮುಖೇಶ್ ಅಗ್ನಿಹೋತ್ರಿ ಅಧಿಕಾರ ಸ್ವೀಕಾರ

- Advertisement -

Latest Posts

Don't Miss