Sunday, December 22, 2024

Latest Posts

ಚುನಾವಣೆಯಲ್ಲಿ ನಮ್ಮ ಪಕ್ಷ ಗೆಲ್ಲಬೇಕು, ಅದಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು : ಹೆಚ್.ಡಿ. ದೇವೇಗೌಡ ಕಿವಿಮಾತು

- Advertisement -

ಬೆಂಗಳೂರು: ಕುಮಾರಸ್ವಾಮಿ ಅವರು ಪಂಚರತ್ನ ರಥಯಾತ್ರೆ ಮಾಡುತ್ತಿದ್ದಾರೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಎಲ್ಲ ಕಡೆ ಪಕ್ಷಕ್ಕೆ ಹೆಚ್ಚು ಶಕ್ತಿ ಬರುತ್ತಿದೆ. ನಾವು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಸೇರ್ಪಡೆ ಸಭೆಯಲ್ಲಿ ಕಿವಿಮಾತು ಹೇಳಿದರು.

ಕಾಂಗ್ರೆಸ್, ಬಿಜೆಪಿ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಭಾರೀ ಸೇರ್ಪಡೆ

ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ತುಂಬಾ ಬೆಳವಣಿಗೆಗಳು ನಡೆಯುತ್ತಿವೆ. ನಾವು ನಮ್ಮ ಪಾಡಿಗೆ ಪಕ್ಷ ಕಟ್ಟುವ ಕೆಲಸ ಮಾಡಬೇಕು. ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲಬೇಕು. ಅದಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ನಗರ ಘಟಕದ ಅಧ್ಯಕ್ಷ ಆರ್ ಪ್ರಕಾಶ್, ಪಕ್ಷಕ್ಕೆ ಸೇರ್ಪಡೆಯಾದ ಗೋವಿಂದರಾಜು, ಶ್ರೀರಾಮೇಗೌಡ ಸೇರಿದಂತೆ ಹಲವಾರು ಗಣ್ಯರು ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಸೇರಿದಂತೆ ಪಕ್ಷದ ಇನ್ನಿತರೆ ಹಿರಿಯ ನಾಯಕರು ಹಾಜರಿದ್ದರು.

ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆಲ್ಲುತ್ತದೆ : ಹೆಚ್.ಡಿ.ಕುಮಾರಸ್ವಾಮಿ

ಜಸ್ಟ್ ಪಾಸ್’ ಆಗಲು ಹೊರಟ ನಟ ಶ್ರೀ ಗೆ ಸಿಕ್ಕಳು ಹೀರೋಯಿನ್ : ಡಿಸೆಂಬರ್ 14ಕ್ಕೆ ಸೆಟ್ಟೇರಲಿದೆ ಸಿನಿಮಾ

- Advertisement -

Latest Posts

Don't Miss