ಕೊಪ್ಪಳ: ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಡೆಗಣನೆ ವಿಚಾರವಾಗಿ ಕಾಂಗ್ರೆಸ್ ನವರು ಮಾತನಾಡಿದ್ದು, ಬಿಜೆಪಿಯಲ್ಲಿ ಬೆಂಕಿ ಹತ್ತಿ ಉರಿಯುತ್ತಿದೆ, ಮನೆಯೊಂದು ಮೂರು ಬಾಗಿಲು ಆಗಿದೆ. ಪಕ್ಷದಲ್ಲಿ ಭಿನ್ನಭಿಪ್ರಾಯ, ಗೊಂದಲಗಳಿವೆ ಎಂಬ ಮಾತಿಗೆ ಬಿಎಸ್ ಯಡಿಯೂರಪ್ಪ ಅವರು ತಿರುಗೇಟು ನೀಡಿದ್ದಾರೆ. ಹಗುರವಾಗಿ ಮಾತನಾಡಿ ಪ್ರಚಾರ ಪಡೆಯುತ್ತೇನೆ ಎಂಬುದು ಭ್ರಮೆ. ಕಾಂಗ್ರೆಸ್ ನವರು ಹೀಗೆ ಹಗುರವಾಗಿ ಮಾತನಾಡಲಿ.ರಾಜ್ಯದಲ್ಲಿ ನಾವು ಮತ್ತೆ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ. ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ್ದರಲ್ಲಿ ನಾನೂ ಒಬ್ಬ, ನನ್ನನ್ನು ಯಾರೂ ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಪಕ್ಷ ಕಟ್ಟಲು ಹಗಲು ರಾತ್ರಿ ಶ್ರಮಿಸಿದ್ದೇನೆ ಎಂದು ಕೊಪ್ಪಳದಲ್ಲಿ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.
ಶಿಕ್ಷಕನ ಅಸಭ್ಯ ವರ್ತನೆಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಧರ್ಮದೇಟು
ದೆಹಲಿ ವಿಮಾನ ನಿಲ್ದಾಣದ ಅವ್ಯವಸ್ಥೆ: ಇಂದು ಕೇಂದ್ರ ಗೃಹ ಕಾರ್ಯದರ್ಶಿಗಳ ಬಿಗ್ ಮೀಟಿಂಗ್