Monday, May 12, 2025

Latest Posts

ಮಂಡ್ಯದಲ್ಲಿ ನಾಳೆ ಜನ ಸಂಕಲ್ಪ ಯಾತ್ರೆ

- Advertisement -

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕು ಕ್ರೀಡಾಂಗಣದಲ್ಲಿ ನಾಳೆ ಸಿಎಂ ನೇತೃತ್ವದಲ್ಲಿ ಜನ ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ,  ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಕಂದಾಯ ಸಚಿವ ಆರ್.ಅಶೋಕ್, ಉನ್ನತ ಶಿಕ್ಷಣ ಸಚಿವ ಸಿ.ಎಸ್‌.ಅಶ್ವಥ್ ನಾರಾಯಣ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಬೃಹತ್ ನೀರಾವರಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ರಾಜ್ಯ ಕಚೇರಿ ಜೆಪಿ ಭವನದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಭೆ

ಇನ್ನು ಸಮಾವೇಶಕ್ಕೆ ಭಾಗವಹಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತು ಗಣ್ಯರನ್ನು ಪ್ರವಾಸಿ ಮಂದಿರ ಕೃಷ್ಣ ರಾಜ ಒಡೆಯರ್ ವೃತ್ತದಿಂದ ಭವ್ಯ ಮೆರವಣಿಗೆಯ ಮೂಲಕ  ಕರೆತಂದು ನಂತರ ಮಧ್ಯಾಹ್ನ ಸುಮಾರು 1 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೋರಾಪುರದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ ಗೆ ಬಂದಿಳಿಯಲಿದ್ದಾರೆ. ಆನಂತರ ಮಳವಳ್ಳಿ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಬಿಜೆಪಿ ಕಛೇರಿಯನ್ನು ಉದ್ಘಾಟಿಸಲಿದ್ದಾರೆ.

- Advertisement -

Latest Posts

Don't Miss