ರಾಸುಗಳಲ್ಲಿ ಕಂಡುಬರುತ್ತಿರುವ ಚರ್ಮಗಂಟು ರೋಗಕ್ಕೆ ಪಶುವೈದ್ಯಕೀಯ ಇಲಾಖೆ ಸಿಬ್ಬಂದಿಗಳು ಗ್ರಾಮವಾರು ಮನೆ ಮನೆಗೆ ಭೇಟಿ ನೀಡಿ ಅವಶ್ಯಕವಿರುವ ಔಷಧಿ ಹಾಗೂ ಲಸಿಕೆ ನೀಡುವಂತೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕೆ,ಡಿ,ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚರ್ಮಗಂಟು ರೋಗದಿಂದ ಹೆಚ್ಚು ಹಸುಗಳು ಬಳಲುತ್ತಿರುವ ಗ್ರಾಮಗಳನ್ನು ಪಟ್ಟಿಮಾಡಿ, ಅಂತಹ ಗ್ರಾಮದ ಕಡೆ ಹೆಚ್ಚಿನ ನಿಗಾ ವಹಿಸಿ ಎಂದರು.
ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ : ಸಚಿವ ಕೆ. ಗೋಪಾಲಯ್ಯ
ಮಿಮ್ಸ್ ಆಸ್ಪತ್ರೆಯಲ್ಲಿ ಹೆಚ್ಚಿನ ರೋಗಿಗಳಿಗೆ ವ್ಯವಸ್ಥೆ ಇದ್ದರೂ ಸಹ ಚಿಕಿತ್ಸೆ ನೀಡದೆ ಬೇರೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುವಂತೆ ದೂರು ಕೇಳಿ ಬರುತ್ತಿದೆ. ಮಿಮ್ಸ್ ಆಸ್ಪತ್ರೆಗೆ ಬಡ ರೋಗಿಗಳು ಹೆಚ್ಚಾಗಿ ಬರುತ್ತಾರೆ. ಬರುವ ರೋಗಿಗಳಿಗೆ ವ್ಯವಸ್ಥಿತವಾಗಿ ಚಿಕಿತ್ಸೆ ನೀಡಿ. ಚಿಕಿತ್ಸೆಗೆ ನೀಡಲು ಹೆಚ್ಚುವರಿ ವ್ಯವಸ್ಥೆ ಹಾಗೂ ಯಾವುದೇ ತೊಂದರೆ ಇದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತನ್ನಿ ಎಂದರು.
ಭಾರೀ ಮಳೆಯಿಂದ ಉಂಟಾದ ರಸ್ತೆ ಗುಂಡಿಗಳನ್ನು ಮುಚ್ಚಲು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ತಾಲ್ಲೂಕಿಗೆ 2 ಕೋಟಿಯಂತೆ ಅನುದಾನ ನಿಗಧಿಪಡಿಸಲಾಗಿದ್ದು, ಲೋಕೋಪಯೋಗಿ ಇಲಾಖೆ ಅವರು ಕಾಮಗಾರಿಗಳನ್ನು ಪ್ರಾರಂಭಿಸಿ 15 ದಿನದೊಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.
ಪಡಿತರ ಅಕ್ಕಿ ಕಳಸಂತೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ಜಿಲ್ಲೆಯಲ್ಲಿ ದೂರು ಕೇಳಿಬರುತ್ತಿದ್ದು, ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು. ಆಹಾರ ಇಲಾಖೆ ಅಧಿಕಾರಿಗಳು ತಮ್ಮ ಸುತ್ತ ಮುತ್ತಲಿನ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಪಡಿತರ ಅಕ್ಕೆ ಲೋಡ್ ಮತ್ತು ಅನ್ಲೋಡ್ ಆಗುವವರಗೆ ನಿಗಾ ವಹಿಸಿಸರೆ ಇದಕ್ಕೆ ಕಡಿವಾಣ ಹಾಕಬಹುದು ಎಂದರು.
ನುಡಿ ಜಾತ್ರೆಗೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಆಹ್ವಾನ ನುಡಿ ಜಾತ್ರೆಗೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಆಹ್ವಾನ
ಜಲ್ ಜೀವನ್ ಮಿಷನ್ ಮನೆ ಮನೆಗೆ ಕುಡಿಯುವ ನೀರು ಒದಗಿಸುವ ಕಾಮಗಾರಿ 2024 ರೊಳಗಾಗಿ ಪೂರ್ಣವಾಗಬೇಕು. ಯಾವುದಾದರೂ ತೊಂದರೆಗಳಿದ್ದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸಿಕೊಳ್ಳಿ ಎಂದರು.
ಪಾAಡವಪುರ ತಾಲ್ಲೂಕಿನ ಕಟ್ಟೇರಿಯಲ್ಲಿರುವ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ವಿರುದ್ಧ ಸೂಕ್ತ ಶಿಸ್ತು ಕ್ರಮ ವಹಿಸುವಂತೆ ಹಾಗೂ ಯಾವುದೇ ಸಾಕ್ಷಿ ನಾಶವಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಲೈವ ರಜನಿಕಾಂತ್ ತಿರುಪತಿ ತಿಮ್ಮಪ್ಪನ ದರ್ಶನ
ಸಭೆಯಲ್ಲಿ ವಿಧಾನ ಪರಿಷತ್ ಶಾಸಕರುಗಳಾದ ದಿನೇಶ್ ಗೂಳಿಗೌಡ, ಮಧು ಜಿ ಮಾಧೆಗೌಡ, ವಿಧಾನಸಭಾ ಶಾಸಕರಾದ ಸಿ.ಎಸ್.ಪುಟ್ಟರಾಜು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಜಯರಾಂ ರಾಯಪುರ, ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು,ಎ.ಎಸ್.ಪಿ.ವೇಣುಗೋಪಾಲ್ ಎಂ, ಡಿ.ಸಿ.ಎಫ್.ರುದ್ರನ್ ಸೇರಿದಂತೆ ಇತರರಿದ್ದರು.
ಕೆ.ಡಿ.ಪಿ ಸಭೆಯ ನಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಕಟ್ಟೇರಿ ಶಾಲೆಗೆ ಅಧಿಕಾರಿಗಳ ತಂಡದೊAದಿಗೆ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಮಾತನಾಡಿ ಘಟನೆ ಕುರಿತು ಮಾಹಿತಿ ಪಡೆದುಕೊಂಡರು