ಮುರುಘಾ ಮಠದ ಶ್ರೀಗಳ ವಿರುದ್ಧ ಪಿತೂರಿ ಪ್ರಕರಣ : ಸೌಭಾಗ್ಯ ಬಸವರಾಜನ್ ಬಂಧನ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪಿತೂರಿ ಪ್ರಕರಣ ಸಂಬಂಧಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್  ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಪೊಲೀಸರು ಬಂಧಿಸಿಸದ್ದಾರೆ. ಮುರುಘಾ ಶ್ರೀಗಳ ವಿರುದ್ಧ ಪಿತೂರಿ ನಡೆಸಿರುವುದು ಬಹಿರಂಗಗೊಂಡಿದ್ದು, ಶ್ರೀಗಳ ವಿರುದ್ಧ ಸುಳ್ಳು ಕೇಸ್‌ ದಾಖಲಿಸಲು ಸಂತ್ರಸ್ತೆಗೆ ಮಠದ ಶಾಲಾ ಶಿಕ್ಷಕನಾಗಿದ್ದ ಬಸವರಾಜೇಂದ್ರ ಪ್ರಚೋದನೆ ನೀಡಿದ್ದ ಆಡಿಯೋ ವೈರಲ್ ಆಗಿತ್ತು. ಈ ಕುರಿತು ನ.9ರಂದು ಮುರುಘಾಮಠದ ಉಸ್ತುವಾರಿ ಬಸವಪ್ರಭುಶ್ರೀ ಅವರು ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನ.10 ರಂದು ಬಸವರಾಜನ್ ಬಂಧನವಾಗಿತ್ತು. ಈಗ ಅವರ ಪತ್ನಿ ಸೌಭಾಗ್ಯ ಅವರನ್ನು ಪೊಲೀಸರು ಬಂಧಿಸಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ಬಿಟ್ಟಿದ್ದಾರೆ.

ಮಂಡ್ಯದಲ್ಲಿ ಇಂದು ಬಿಜೆಪಿ ಜನಸಂಕಲ್ಪ ಯಾತ್ರೆ

ಮಲೇಷ್ಯಾದಲ್ಲಿ ಭೂಕುಸಿತ : 8 ಜನರ ಸಾವು, 50ಕ್ಕೂ ಹೆಚ್ಚು ಜನ ನಾಪತ್ತೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕೋಲಾರ ಬಂದ್

About The Author