ಹಾಸನ: ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಯಿಸಿ, ಚನ್ನರಾಯಪಟ್ಟಣದಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಎಪಿಎಂಸಿ ಮಾರುಕಟ್ಟೆ ಆವರಣದಿಂದ ತಾಲ್ಲೂಕು ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಮಾಡಲಾಗುತ್ತಿದೆ. ನೂರಾರು ರೈತರು ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಭಾರತದಲ್ಲಿ ರಸ್ತೆ ಮೂಲಸೌಕರ್ಯವು 2024 ರ ವೇಳೆಗೆ ಯುಎಸ್ಎ ಗುಣಮಟ್ಟಕ್ಕೆ ಸಮನಾಗಿರುತ್ತದೆ: ನಿತಿನ್ ಗಡ್ಕರಿ
ಶಾಸಕ ಸಿ.ಎನ್ ಬಾಲಕೃಷ್ಣ ಅವರು ತಹಸಿಲ್ದಾರ್ ರಿಗೆ ಮನವಿ ಪತ್ರ ಸಲ್ಲಿಸಲಿದರು. ನಿನ್ನೆ ಅರಸೀಕೆರೆಯಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಪ್ರತಿಭಟನೆ ನಡೆಸಿದ್ದರು. ಇಂದು ಚನ್ನರಾಯಪಟ್ಟಣ ದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಿಸಿ ಪ್ರತಿಭಟನೆಯನ್ನು ಮಾಡಲಾಗುತ್ತಿದೆ.
ತೃತೀಯ ಲಿಂಗಿಗಳ ಸಮಾನತೆಗೆ ಸರ್ಕಾರ ಹೆಚ್ಚಿನ ಜಾಗೃತಿ ಕಾರ್ಯಕ್ರಮ ನಡೆಸಬೇಕು : ನ್ಯಾಯಾಧೀಶೆ ಜೋಯಿತಾ ಮೊಂಡಲ್