ಹಾಸನ: ಬೇಲೂರು ತಾಲ್ಲೂಕಿನ ಮಾದಿಹಳ್ಳಿ ಹೋಬಳಿಯ ಕ್ಯಾತನಕೇರೆಯಿಂದ ಮಲ್ಲಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿ ಬಿದ್ದು ಕೆಸರುಗದ್ದೆಯಂತಾಗಿದೆ. ಕೂಡಲೇ ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಕೊಮಾನಹಳ್ಳಿ, ಸಾವಾಸಿಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕ್ಯಾತನಕೇರೆಯಿಂದ ಮಲ್ಲಾಪುರ ಗ್ರಾಮದ ವರೆಗೆ ಇರುವ 3 ಕಿ.ಮೀ. ಇರುವ ರಸ್ತೆ ಗುಂಡಿಮಯವಾಗಿದ್ದು ವಾಹನ ಸವಾರರು, ಸಾರ್ವಜನಿಕರು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇವೆ : ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳಿಸುವ ನಿರ್ಧಾರಕ್ಕೆ ಅಮೇರಿಕಾ ಸಾಥ್
ಈ ರಸ್ತೆಯಲ್ಲಿ ನಿಯಮ ಮೀರಿ ಕಲ್ಲು ಸಾಗಿಸುವ ಲಾರಿಗಳ ಸಂಚಾರದಿಂದ ರಸ್ತೆಗಳಲ್ಲಿ ಗುಂಡಿ ಬಿದ್ದಿವೆ. ಅಧಿಕ ಭಾರಹೊತ್ತು ಸಾಗುವ ಲಾರಿಗಳ ಸಂಚಾರಕ್ಕೆ ಬ್ರೇಕ್ ಹಾಕಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಈ ಭಾಗದಲ್ಲಿ ಗಣಿಗಾರಿಕೆ ನಡೆಯುತ್ತಿರುವುದರಿಂದ 60, 70 ಟನ್ ಭಾರ ಹೊತ್ತ ಲಾರಿಗಳ ಸಂಚಾರದಿಂದ ರಸ್ತೆ ಗುಂಡಿ ಬೀಳಲು ಪ್ರಮುಖ ಕಾರಣವಾಗಿದೆ. ನಿಯಮ ಮೀರಿ ಬಂಡೆಗಳನ್ನು ಬ್ಲಾಸ್ಟ್ ಮಾಡಲಾಗುತ್ತಿದೆ. ಇದರಿಂದ ಬಡವರ ಮನೆಗಳು ಬಿರುಕು ಬಿಡುತ್ತಿವೆ. ರಸ್ತೆ ಗುಂಡಿ ಮುಚ್ಚುಂತೆ ಶಾಸಕರಿಗೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ದೂರಿದರು.
ಅಮಿತಾಬ್ ಬಚ್ಚನ್ ಗೆ ‘ಭಾರತ ರತ್ನ ಪ್ರಶಸ್ತಿ’ ನೀಡಲು ಮಮತಾ ಬ್ಯಾನರ್ಜಿ ಮನವಿ