ಬೆಳಗಾವಿ: ಇಂದು ಬೆಳಗಾವಿಯ ಚಳಿಗಾಲದ ಅಧಿವೇಶನ ಹಿನ್ನೆಲೆ, ಬೆಳಗಾವಿಗೆ ಸಿದ್ದರಾಮಯ್ಯನವರು ಆಗಮಿಸಿ ಸುವರ್ಣ ಸೌಧದ ಮೆಟ್ಟಿಲುಗಳ ಮೇಲೆ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಜೊತೆ ಧರಣಿಯಲ್ಲಿ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದಾರೆ. ಸಾವರ್ಕರ್ ಭಾವಚಿತ್ರ ಅನಾವರಣ ವಿರೋಧಿಸಿ ಕುವೆಂಪು, ನಾರಾಯಣಗುರು ಭಾವ ಚಿತ್ರ ಹಿಡಿದುಕೊಂಡು ಪ್ರತಿಭಟನೆ ನಡೆಸಲಿದ್ದಾರೆ.
ಪೇಟೆಂಟ್ ಮಂಜೂರಾತಿ ಸಮಯ ಕಡಿಮೆ ಮಾಡಲು ಕೇಂದ್ರ ಪ್ರಯತ್ನಿಸುತ್ತಿದೆ : ಸಚಿವೆ ನಿರ್ಮಲಾ ಸೀತಾರಾಮನ್
ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಮಾಜ ಸುಧಾರಣೆಗೆ ಶ್ರಮಿಸಿದ ನಾಯಕರ ಪೋಟೋ ಸುವರ್ಣಸೌಧದಲ್ಲಿ ಅಳವಡಿಸಬೇಕೆಂದು ಮೆಟ್ಟಿಲುಗಳ ಮೇಲೆ ಕುಳಿತು ಧರಣಿ ನಡೆಸುತ್ತಿದ್ದಾರೆ.
ಚಳಿಗಾಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ಬೆಳಗಾವಿಗೆ ಆಗಮನ