ಮಂಡ್ಯ: ಕಬ್ಬಿಗೆ ದರ ನಿಗದಿ ಮತ್ತು ಹಾಲಿನ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ ಇಂದು ರಾಜ್ಯ ರೈತ ಸಂಘ ಮಂಡ್ಯ ನಗರ ಬಂದ್ ಗೆ ಕರೆ ನೀಡಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 43 ದಿನಗಳಿಂದ ಪ್ರತಿ ಟನ್ ಕಬ್ಬಿಗೆ ಕನಿಷ್ಠ 500 ರೂ. ಹೆಚ್ಚುವರಿ ಎಸ್‌ಎಪಿ ಘೋಷಣೆಯಾಗಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟಿಸುತ್ತಿದ್ದಾರೆ. ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸಬೇಕು. ಪ್ರತಿ ಲೀಟರ್ ಹಾಲಿಗೆ 40 ರೂ ನೀಡಬೇಕು ಎಂದು ವಿವಿಧ ಬೇಡಿಕೆ ಈಡೇರಿಸುವಂತೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ವಿವೇಚನೆಯಿಲ್ಲದ ವಿಷಯ ಪ್ರಸ್ತಾಪಿಸಿ, ಕಾಂಗ್ರೆಸ್ ಜನರ ಕೆಂಗಣ್ಣಿಗೆ ಗುರಿಯಾಗಿದೆ : ಗೋವಿಂದ ಕಾರಜೋಳ
ಇಂದು ಬೃಹತ್ ಮೆರವಣಿಗೆ ಮೂಲಕ ಸರ್ .ಎಂ. ವಿಶ್ವೇಶ್ವರಯ್ಯ ಪ್ರತಿಮೆಯಿಂದ ಮಂಡ್ಯದ ಸಂಜಯ ವೃತ್ತದಲ್ಲಿ ಬೃಹತ್ ಸಮಾವೇಶ ನಡೆಸಿ ವಿಧ್ಯಾರ್ಥಿಗಳ ಜೊತೆಗುಡಿ ವಿವಿಧ ಸಂಘಟನೆಗಳು ಕೂಡ ರೈತರ ಪ್ರತಿಭಟನೆಗೆ ಸಹಕರಿಸಿದರು. ಬಂದ್ ಗೆ ನಗರದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬೆಂಬಲ ವ್ಯಕ್ತಪಡಿಸಲು ವರ್ತಕರು ಒಪ್ಪಿದ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಬಂದ್ ನಡೆಯಲಿದೆ.
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಕುರಿತು ಗುಪ್ತಚರ ವರದಿ ಬಹಿರಂಗಪಡಿಸಿದೆ : ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ, ಜನವೆರಿ 1ರೊಳಗೆ ಪ್ರಕಟಿಸಲಾಗುವುದು : ಡಿಕೆ ಶಿವಕುಮಾರ್