ಮೊದಲ ಬಾರಿಗೆ ಎರಡು ದಿನಗಳ ‘ಬಳ್ಳಾರಿ ಉತ್ಸವ’

ಬಳ್ಳಾರಿ: ಹೊಸ ಜಿಲ್ಲೆ ರಚನೆಯಾದ ನಂತರ ಮೊದಲ ಬಾರಿಗೆ ಎರಡು ದಿನಗಳ ‘ಬಳ್ಳಾರಿ ಉತ್ಸವ’ವನ್ನು ಆಯೋಜಿಸಲಾಗುತ್ತದೆ. ಬಳ್ಳಾರಿ ಮತ್ತು ವಿಜಯನಗರ ವಿಭಜನೆಗೊಂಡಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಶಾಸಕ ಸೋಮಶೇಖರ ರೆಡ್ಡಿ ಸಹ ಸಭೆಯಲ್ಲಿ ಉಪಸ್ಥಿತರಿದ್ದರು.

ಕೊರೊನಾದಿಂದ ಪಾರಾಗಲು ಕೇಂದ್ರ ಸರ್ಕಾರ ಸಿದ್ಧತೆ : ಪರಿಸ್ಥಿಯ ಕುರಿತು ಇಂದು ಪರಿಶೀಲನಾ ಸಭೆ

ಸಚಿವ ಬಿ. ಶ್ರೀರಾಮುಲು ಮಾತನಾಡಿ, ಬಳ್ಳಾರಿ ಜಿಲ್ಲೆ ವಿಭಜನೆಯಾದ ನಂತರ, ಮೊದಲ ಬಾರಿಗೆ ಬಳ್ಳಾರಿ ಉತ್ಸವವನ್ನು ಜನವರಿ 21 ಮತ್ತು 22ರಂದು ವಿಜೃಂಭಣೆಯಿಂದ ಆಚರಿಸಲಾಗುವುದು. ಎರಡು ದಿನಗಳ ಬಳ್ಳಾರಿ ಉತ್ಸವವನ್ನು ಆಚರಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಒಂದೊಂದು ಜವಾಬ್ದಾರಿಯನ್ನು ತೆಗೆದುಕೊಂಡು ಅದ್ದೂರಿ ಆಚರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು. ಬಳ್ಳಾರಿ ಮತ್ತು ವಿಜಯನಗರ ಒಂದೇ ಆಗಿದ್ದಾಗ ‘ಹಂಪಿ ಉತ್ಸವ’ ನಡೆಯುತ್ತಿತ್ತು. ಈಗ ಇದೇ ಮಾದರಿಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ‘ಬಳ್ಳಾರಿ ಉತ್ಸವ’ವನ್ನು 2 ದಿನಗಳ ಕಾಲ ನಗರದ ಡಾ. ರಾಜ್‍ಕುಮಾರ್ ರಸ್ತೆಯ ಮುನಿಸಿಪಾಲ್ ಕಾಲೇಜು ಮೈದಾನದಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುವುದು.

ರಸ್ತೆ ಅಗಲೀಕರಣ ಹಿನ್ನೆಲೆ ಹುಬ್ಬಳ್ಳಿಯಲ್ಲಿ ದರ್ಗಾ ಕಟ್ಟಡ ತೆರವು

About The Author