ಬೆಳಗಾವಿ: ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು ಸುವರ್ಣಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವದ ವಿವಿಧ ದೇಶಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಯಾವ ರೀತಿಯಲ್ಲಿದೆ ಎಂಬ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಬಗ್ಗೆ ಕಟ್ಟೆಚ್ಚರ ವಹಿಸಲು ರಾಜ್ಯಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್ ಸೋಂಕನ್ನು ಯಾವ ರೀತಿ ನಿಯಂತ್ರಣ ಮಾಡಬೇಕು, ಯಾವ ರೀತಿಯ ಟೆಸ್ಟ್‌ಗಳನ್ನು ಹೆಚ್ಚಳ ಮಾಡಬೇಕು ಎನ್ನುವ ಕುರಿತು ಚರ್ಚಿಸಲಾಗುವುದು.
ದುಡ್ಡು ಉಳಿಸೋದು ಹೇಗೆ..? ಅವಶ್ಯಕತೆ ಇಲ್ಲದ ಖರ್ಚನ್ನ ಕಡಿಮೆ ಮಾಡುವುದು ಹೇಗೆ..?
ಗುರುವಾರ ಸುವರ್ಣ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ. ಸಭೆಯಲ್ಲಿ ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವಿಕೆ ತಡೆಗಟ್ಟುವ ಕ್ರಮಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಕೋವಿಡ್ ಜೊತೆಗ ಹೊಸ ರೂಪಾಂತರಿ ವೈರಸ್ ಸೋಂಕುಗಳು ಕಂಡು ಬರುತ್ತಿರುತ್ತಿವೆ. ಈ ಹಿನ್ನೆಲೆ ಕೋವಿಡ್ ಮಾರ್ಗಸೂಚಿಯನ್ನು ಆದಷ್ಟು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ರಾಜ್ಯದಲ್ಲಿ ಸದ್ಯಕ್ಕೆ ಆತಂಕವಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು. ಕೇಂದ್ರ ಆರೋಗ್ಯ ಇಲಾಖೆಯೊಂದಿಗೂ ಚರ್ಚೆ ನಡೆಸಲಾಗುವುದು. ಅಲ್ಲಿಂದ ಮಾರ್ಗದರ್ಶನ, ಸಲಹೆ ಪಡೆದು ಮಾರ್ಗಸೂಚಿ ಹೊರಡಿಸಲಾಗುವುದು. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿಗಾ ಇಡಲು ಆರಂಭಿಸಿದ್ದೇವೆ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12ರಿಂದ ರಾಷ್ಟ್ರೀಯ ಯುವಜನೋತ್ಸವ : ಸಿಎಂ ಬೊಮ್ಮಾಯಿ
ಚೀನಾ, ಜಪಾನ್ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಚೀನಾದಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಹೀಗಾಗಿ ಎಲ್ಲ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಿ ಪರೀಕ್ಷಿಸಲು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ. ಜೊತೆಗೆ ಕೋವಿಡ್ ಮಾರ್ಗಸೂಚಿ ಸಹ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ನನ್ನು ಬಿಡುಗಡೆ ಮಾಡಿದ ಸುಪ್ರೀಂ ಕೋರ್ಟ್
ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12ರಿಂದ ರಾಷ್ಟ್ರೀಯ ಯುವಜನೋತ್ಸವ : ಸಿಎಂ ಬೊಮ್ಮಾಯಿ