Wednesday, February 5, 2025

Latest Posts

ಒಕ್ಕಲಿಗರ ಮೀಸಲಾತಿ ಹೆಚ್ಚಳದ ಬಗ್ಗೆ ಸಿಎಂ ಬಳಿ ಚರ್ಚಿಸಲಾಗುವುದು : ಡಾ.ಕೆ.ಸುಧಾಕರ್‌

- Advertisement -

ಬೆಳಗಾವಿ: ಒಕ್ಕಲಿಗರು ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದಾರೆ. ಮೀಸಲಾತಿಗೆ ಆಗ್ರಹಿಸಿ ಅನೇಕ ಸಮುದಾಯಗಳು ಹೋರಾಟ ಮಾಡುತ್ತಿವೆ. ಈ ಬಗ್ಗೆ ಕಂದಾಯ ಸಚಿವರಾದ ಆರ್‌.ಅಶೋಕ್‌ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಬಳಿಕ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಮಾತನಾಡಿ, ಕೃಷಿಯನ್ನೇ ಆಧಾರವಾಗಿಟ್ಟುಕೊಂಡು ಬದುಕುತ್ತಿರುವ ಒಕ್ಕಲಿಗರು ರಾಜ್ಯದ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡುತ್ತಿದ್ದಾರೆ. ಅನ್ನದಾತರಾದ ಒಕ್ಕಲಿಗ ಸಮಾಜದವರು ನ್ಯಾಯಯುತವಾದ ಬೇಡಿಕೆಯನ್ನೇ ಇಟ್ಟಿದ್ದಾರೆ ಎಂದರು.

ಮಂಡ್ಯದಳ್ಳಿ ಪಂಚರತ್ನ ರಥಯಾತ್ರೆಗೆ ಅದ್ದೂರಿ ಸ್ವಾಗತ

ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ಈ ಬಗ್ಗೆ ಸಭೆ ಕೂಡ ನಡೆದಿತ್ತು. ಅದರ ಭಾಗವಾಗಿಯೇ ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕ ಮಿತ್ರರೊಂದಿಗೆ, ಕಂದಾಯ ಸಚಿವರಾದ ಆರ್‌.ಅಶೋಕ್‌ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ನಂತರ ಮುಖ್ಯಮಂತ್ರಿ ಬೊಮ್ಮಾಯಿ ಅವರ ಬಳಿಯೂ ಈ ಬಗ್ಗೆ ಚರ್ಚಿಸಲಾಗುವುದು. ಸರ್ಕಾರವು ಎಲ್ಲಾ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ನೀಡುವ ವಿಶ್ವಾಸವಿದೆ. ಬಲಹೀನ ವರ್ಗಗಳಿಗೆ ಈಗಾಗಲೇ ಮೀಸಲಾತಿ ಹೆಚ್ಚಳ ಮಾಡುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡಿದೆ. ಅದೇ ರೀತಿ ಕಾನೂನಿನ ತೊಡಕುಗಳನ್ನು ಅವಲೋಕಿಸಿ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಮಂಡ್ಯದಳ್ಳಿ ಪಂಚರತ್ನ ರಥಯಾತ್ರೆಗೆ ಅದ್ದೂರಿ ಸ್ವಾಗತ

ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಸರ್ಕಾರ ಕೋವಿಡ್ ವೈರಸ್ ಬಿಡುಗಡೆ ಮಾಡಿದೆ : ಉದ್ಧವ್ ಠಾಕ್ರೆ

- Advertisement -

Latest Posts

Don't Miss