ಬೆಳಗಾವಿ: ಇಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಿತು. ಎಂ,ಕೆ ಪ್ರಾಣೇಶ್ ನಾಮಪತ್ರ ಸಲ್ಲಿಸಿದ್ದರು. 39 ಮತ ಪಡೆಯುವ ಮೂಲಕ ಸಭಾಪತಿಯಾಗಿ ಎಂ,ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅರವಿಂದ ಅರಳಿ 26 ಮತ ಪಡೆದಿದ್ದಾರೆ. ಇವರು ಉಪ ಸಭಾಪತಿ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಕೋಟಾ ಶ್ರೀನಿವಾಸ್ ಪೂಜಾರಿ, ಎಸ್. ರುದ್ರೇಗೌಡ,ತಳವಾರ್ ಸಾಬಣ್ಣ, ಅರುಣ್ ಡಿಎಸ್ ಅವರು ಬಿಜೆಪಿಯಿಂದ ಎಂ.ಕೆ ಪ್ರಾಣೇಶ್ ಹೆಸರು ಉಪಸಭಾಪತಿ ಸ್ಥಾನಕ್ಕೆ ಪ್ರಸ್ತಾಪ ಮಾಡಿದ್ದರು. ಉಪಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಅರವಿಂದ ಕುಮಾರ್ ಅರಳಿ ಅವರ ಹೆಸರನ್ನು ಬಿ.ಕೆ. ಹರಿಪಸ್ರಾದ್ ಪ್ರಸ್ತಾಪ ಮಾಡಿದರು. ಇನ್ನು ಪರಿಷತ್ ನಲ್ಲಿ ಗದ್ದಲದ ನಡುವೆಯೇ ಚುನಾವಣೆ ಪ್ರಕ್ರಿಯೆ ಮುಂದುವರೆಡಿದ್ದು, ಸದಸ್ಯರು ಎದ್ದು ನಿಂತು ಮತ ಹಾಕುವಂತೆ ಸಭಾಪತಿ ಸೂಚನೆ ನೀಡಿದರು. ಪ್ರಾಣೇಶ್ ಪರ ಮತ ಚಲಾಯಿಸುವವರು ಎದ್ದು ನಿಲ್ಲುವಂತೆ ಸೂಚಿಸಿದ್ದು ಪ್ರಾಣೇಶ್ ಪರ 39 ಮತಗಳು ಚಲಾವಣೆಗೊಂಡಿವೆ. ಜೆಡಿಎಸ್ ಪಕ್ಷದಿಂದ ಯಾರೊಬ್ಬರೂ ಕೂಡ ಮತ ಚಲಾಯಿಸಿರಲಿಲ್ಲ. ಪ್ರಸ್ತಾವದ ಪರವಾಗಿ 39 ಮತಗಳು ಬಂದಿವೆ. ಪ್ರಸ್ತಾವದ ವಿರೋಧವಾಗಿ 26 ಮತಗಳು ಬಂದವು. ಅಂತಿಮವಾಗಿ ಪ್ರಾಣೇಶ್ ಅವರು ಉಪಸಭಾಪತಿಯಾಗಿ ಆಯ್ಕೆಯಾಗಿದ್ದಾರೆಂದು ಸಭಾಪತಿ ಬಸವರಾಜ್ ಹೊರಟ್ಟಿ ಘೋಷಣೆ ಮಾಡಿದರು.
ನೂತನವಾಗಿ ಆಯ್ಕೆಯಾದ ಉಪ ಸಭಾಪತಿ ಪ್ರಾಣೇಶ್ ಅವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಎಲ್ಲಾ ನಾಯಕರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಸಚಿವ ಮಾಧುಸ್ವಾಮಿ ಮಾತನಾಡಿ, ಧರ್ಮೇಗೌಡರು ಆಕಾಲಿಕ ನಿಧನದಿಂದ ಪ್ರಾಣೇಶ್ ಅವರನ್ನು ಕೂರಿಸಬೇಕಾಯಿತು. ವಿಪಕ್ಷಗಳು ಹೇಳಿದ್ದನು ನಾನು ಅನುಮೋದಿಸುತ್ತೇನೆ. ಆದರೆ ಸದಸ್ಯರು ತಮ್ಮ ಜವಾಬ್ದಾರಿ ಅರಿತರೇ ಎಲ್ಲವೂ ಸರಿ ಹೋಗುತ್ತೆ ಎಂದರು.
ಇಂದಿನಿಂದ ಮೂಗಿನ ಲಸಿಕೆ ಪ್ರಾರಂಭ : ಕೊರೊನಾ ವೈರಸ್ ನಾಸಲ್ ಲಸಿಕೆಗೆ ಕೇಂದ್ರ ಅನುಮೋದನೆ