ಬೆಂಗಳೂರು: ಕೊರೊನಾ ಆತಂಕ ಹೆಚ್ಚಾಗಿದು, ಎಲ್ಲರಿಗೂ ಭಯ ಹುಟ್ಟುಸಿಟ್ಟಿದೆ. ಇನ್ನು ಬೆಂಗಳೂರಿನಲ್ಲಿ ಕಠಿಣ ಕ್ರಮ ಜಾರಿಗೊಳಿಸಲು ಸರ್ಕಾರ ಈಗಾಗಲೇ ಗೈಡ್‌ಲೈನ್ಸ್ ಹೊರಡಿಸಿದೆ. ಬಿಎಫ್.7 ವಿರುದ್ಧ ಹೋರಾಡಲು ಸರ್ಕಾರ ಎಲ್ಲಾ ರೀತಿಯಿಂದಲೂ ತಯಾರಾಗಿದೆ. ಆಕ್ಸಿಜನ್ ಪ್ಲಾಂಟ್, ಆಕ್ಸಿಜನ್ ಜನರೇಟರ್ ಸೇರಿದಂತೆ ಕೋವಿಡ್ ಉಪಕರಣಗಳು, ಸಿಬ್ಬಂಧಿಗಳು, ವ್ಯವಸ್ಥೆಗಳು ಸರಿಯಾಗಿದೆಯೇ ಎನ್ನುವುದನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ ಡಿಸೆಂಬರ್ 27ರಂದು ಎಲ್ಲಾ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ನಡೆಸುವುದಾಗಿ ಅರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಯೂರಿಕ್ ಆಮ್ಲವನ್ನು ನಿಯಂತ್ರಿಸಲು ಈ ಆಹಾರಗಳನ್ನು ಬಳಸಿ : ಕೆಲವೇ ದಿನಗಳಲ್ಲಿ ರಿಸಲ್ಟ್ ನಿಮಗೆ ತಿಳಿಯುತ್ತದೆ..!
ಕೇಂದ್ರ ಆರೋಗ್ಯ ಸಚಿವರು ನಡೆಸಿದ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ಪ್ರತಿದಿನ ವಿಶ್ವದಲ್ಲಿ 5ರಿಂದ ಲಕ್ಷ ಕೇಸ್‌ಗಳು ಪತ್ತೆಯಾಗುತ್ತಿವೆ. ಈ ಪೈಕಿ ಚೀನಾ, ಜಪಾನ್, ತೈವಾನ್, ಅಮೆರಿಕಾ, ಯುರೋಪ್, ನ್ಯೂಜಿಲೆಂಡ್ ಸೇರಿದಂತೆ ಶೇ.80 ರಷ್ಟು ಹೊಸ ಕೇಸ್‌ಗಳು 10 ರಾಷ್ಟ್ರಗಳಲ್ಲಿ ಕಾಣಿಸಿಕೊಳ್ಳುತ್ತಿದೆ ಎಂದು ತಿಳಿಸಿದರು. ಕಳೆದ ಮೂರು ತಿಂಗಳಿನಿಂದ ಕೊರೊನಾ ವಿಶ್ವದ ನಾನಾ ದೇಶಗಳಲ್ಲಿ ಹೇಗೆ ಏರಿಕೆಯಾಗುತ್ತಿದೆ ಅನ್ನುವ ಬಗ್ಗೆ ಸಭೆಯಲ್ಲಿ ಎಲ್ಲಾ ರಾಜ್ಯಗಳಿಗೂ ಮಾಹಿತಿ ನೀಡಿದರು. ಸದ್ಯ ಭಾರತದಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ 0.03% ರಷ್ಟು ಇದೆ. ಭಾರತದಲ್ಲಿ ಎರಡು ಡೋಸ್‌ಗಳ ಲಸಿಕಾಕರಣ ಆಗಿರುವುದು ಇದಕ್ಕೆ ದೊಡ್ಡ ಕಾರಣವಾಗಿದೆ. ಜೊತೆಗೆ ನಮ್ಮ ಜನರಲ್ಲಿ ಸ್ವಾಭಾವಿಕವಾದಂತಹ ರೋಗ ನಿರೋಧಕ ಶಕ್ತಿಯೂ ಒಂದು ಕಾರಣವಾಗಿರಬಹುದು. ವಿದೇಶಗಳಿಗೆ ಹೋಲಿಕೆ ಮಾಡಿದಾಗ ಕೊರೊನಾ ನಿಯಂತ್ರಣದ ಬಗ್ಗೆ ನಮ್ಮ ದೇಶದ ಜನ ಹೆಚ್ಚು ಕಾಳಜಿ ವಹಿಸಿರುವುದು ಕಂಡುಬಂದಿದೆ ಎಂದು ತಿಳಿಸಿದರು.
ಕೂದಲಿನ ಸಮಸ್ಯೆಗಳನ್ನು ಹೋಗಲಾಡಿಸಲು ಕಾಫಿಯನ್ನು ಹೇಗೆ ಬಳಸಬೇಕು ಎಂಬುದನ್ನು ತಿಳಿಯೋಣ ಬನ್ನಿ..!