Friday, December 13, 2024

Latest Posts

ಇಂದಿನಿಂದ ಡಿ. 29ರವರೆಗೆ ಕರ್ನಾಟಕದಲ್ಲಿ ಹಲವೆಡೆ ಮಳೆ..!

- Advertisement -

ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ. ಇಂದಿನಿಂದ ಡಿ. 29ರವರೆಗೆ ಹಲವೆಡೆ ಸಾಧಾರಣ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಾಸನದ ಕೊರಿಯರ್ ಶಾಪ್ ನಲ್ಲಿ ಮಿಕ್ಸಿ ಬ್ಲಾಸ್ಟ್ ಪ್ರಕರಣ : ಎಸ್ಪಿ ಹರಿರಾಮ್ ಶಂಕರ್ ಭೇಟಿ

ಇಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಡಿ. 30ರವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಉಳಿದೆಡೆ ಇನ್ನೂ 3 ದಿನ ತುಂತುರು ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವುದೆಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕ ಮಾತ್ರವಲ್ಲದೆ ಕೇರಳ ಮತ್ತು ಮಾಹೆಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ದಟ್ಟವಾದ ಮಂಜು ಕವಿಯಲಿದೆ. ಕರಾವಳಿ ಒಡಿಶಾದಲ್ಲಿ ಮುಂಜಾನೆ ಮಂಜು ಕವಿಯಲಿದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನದಲ್ಲಿ ಶೀತ ಅಲೆಯ ಪರಿಸ್ಥಿತಿಗಳಿವೆ.

ಕಾಡಾನೆ ಹಾವಳಿ ತಡೆಯದ ಸರ್ಕಾರಕ್ಕೆ ಸೆಡ್ಡು ಹೊಡೆದು ನಿಂತ ರೈತರು

ಹಾಸನದ ಕೋರಿಯರ್ ಅಂಗಡಿಯಲ್ಲಿ ಸ್ಫೋಟ

- Advertisement -

Latest Posts

Don't Miss