Wednesday, September 17, 2025

Latest Posts

ಪ್ರಧಾನಿ ಮೋದಿ ತಾಯಿ ಹೀರಾಬೆನ್ ವಿಧಿವಶ

- Advertisement -

ನವದೆಹಲಿ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು, ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಮಂಗಳವಾರ ಅಹಮದಾಬಾದ್‌ನ ಯುಎನ್ ಆಸ್ಪತ್ರೆಗೆ ದಾಖಲಾಗಿದ್ದರು, ಇಂದು ಕೊನೆಯುಸಿರೆಳೆದಿದ್ದಾರೆ. ತಾಯಿಯ ಸಾವಿನ ಮಾಹಿತಿ ತಿಳಿದ ತಕ್ಷಣ ಪ್ರಧಾನಿ ಮೋದಿ ದೆಹಲಿಯಿಂದ ಅಹಮದಾಬಾದ್‌ಗೆ ತೆರಳಿದ್ದಾರೆ.

ಮಂಡ್ಯಕ್ಕೆ ಇಂದು ಅಮಿತ್ ಶಾ ಆಗಮನ ಹಿನ್ನೆಲೆ : ರಸ್ತೆಗೆ ಡಾಂಬರೀಕರಣ ಹಾಗೂ ಸ್ವಚ್ಚತಾ ಕಾರ್ಯ

ಮೋದಿ ಅವರ ತಾಯಿಯ ನಿಧನಕ್ಕೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ. ತಾಯಿ ಹೀರಾಬೆನ್ ನಿಧನಕ್ಕೆ ಬಾಲಿವುಡ್ ಕಂಬನಿ ಮಿಡಿದಿದ್ದು, ಬಾಲಿವುಡ್ ತಾರೆಯರು ಕೂಡ ಸಂತಾಪ ಸೂಚಿಸಿದ್ದಾರೆ. ಇಂದು ಪ್ರಧಾನಿ ಕೋಲ್ಕತ್ತಾದಲ್ಲಿ ನಡೆಯಲಿರುವ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದರು, ಆದರೆ ಇದೀಗ ಎಲ್ಲಾ ಕಾರ್ಯಕ್ರಮಗಳನ್ನು ಸದ್ಯಕ್ಕೆ ರದ್ದುಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ.

- Advertisement -

Latest Posts

Don't Miss