ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ವತಿಯಿಂದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನೂತನ ವರ್ಷಕ್ಕೆ ಸ್ವಾಗತ ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಮಾತನಾಡಿ ಹೊಸ ವರ್ಷದಲ್ಲಿ ಉತ್ತಮ ಮಳೆ ಬೆಳೆಯಾಗಿ ಸಮಸ್ತ ರೈತರು ಸುಖ, ಶಾಂತಿ, ಸಮೃದ್ಧಿಯನ್ನು ಹೊಂದಲಿ ಎಂದು ಆಶಯ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆ ವತಿಯಿಂದ ಉತ್ತಮ ಕೆಲಸ ಕಾರ್ಯ ನಡೆಯುತ್ತಿವೆ. ಕಂದಾಯ ಇಲಾಖೆಯ ಅಧಿಕಾರಿಗಳು ಈ ವರ್ಷ ಅತೀ ಹೆಚ್ಚಿನ ಕೆಲಸ ನಿರ್ವಹಿಸಿ ಇಲಾಖೆಗೆ ಒಳ್ಳೆಯ ಹೆಸರು ತರಬೇಕು ಎಂದರು.
ಜೆಡಿಎಸ್ ಅಧ್ಯಕ್ಷರ ಹುಟ್ಟಿದ ಹಬ್ಬದಲ್ಲಿ ಸೇಬಿಗಾಗಿ ಮುಗಿಬಿದ್ದ ಜನ..
ರಾಜ್ಯದಲ್ಲಿ ಮಂಡ್ಯ ಜಿಲ್ಲೆಯು ಕಂದಾಯ ಇಲಾಖೆಯ ವಿಷಯಕ್ಕೆ ಸಂಬಂಧಿಸಿದಂತೆ ಎಲ್ಲಾ ಅಂಶಗಳಲ್ಲೂ ಉತ್ತಮವಾದ ಕೆಲಸ ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಅಧಿಕಾರಗಳು ಹಾಗೂ ಸಿಬ್ಬಂದಿಗಳಿಗೆ ಧ್ಯನ್ಯವಾದ ಸಲ್ಲಿಸುತ್ತೆನೆ. ಸಾರ್ವಜನಿಕರಿಗೆ, ರೈತರಿಗೆ, ಮಹಿಳೆಯರಿಗೆ ಒಳ್ಳೆಯ ರೀತಿಯ ಸೇವೆಯನ್ನು ಒದಗಿಸುವುದು ಇಲಾಖೆಯ ಕರ್ತವ್ಯವಾಗಿದೆ ಎಂದರು.
ಈ ವರ್ಷ ಚುನಾವಣಾ ವರ್ಷವಾಗಿದ್ದು ಮುಂಬರುವ ಎಲ್ಲಾ ರೀತಿಯ ಚುನಾವಣೆಗೆ ಸಕಲ ರೀತಿಯಲ್ಲಿ ಸಿದ್ದತೆ ಮಾಡಿಕೊಳ್ಳೊಣ ಎಂದರು.
ಮರೆತೂ ಕೂಡ ಖಾಲಿ ಹೊಟ್ಟೆಯಲ್ಲಿ ಈ 4 ಆಹಾರಗಳನ್ನು ತಿನ್ನಬೇಡಿ..!
ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು ಅವರು ಮಾತನಾಡಿ ೨೦೨೨ ರಲ್ಲಿ ಕಂದಾಯ ಇಲಾಖೆಯ ಕೆಲಸಗಳಿಗೆ ಸಂಬಂಧಿಸಿದಂತೆ ವಿಶೇಷವಾಗಿ ರಾಜ್ಯದ ಟಾಪ್ ೫ ಲಿಸ್ಟ್ ನಲ್ಲಿ ಮಂಡ್ಯ ಜಿಲ್ಲೆ ಇದೆ ಎಂದು ಸಂತಸ ವ್ಯಕ್ತಪಡಿಸಿದರು. ಇದೇ ವರ್ಷದಲ್ಲಿ ಸಾರ್ವತ್ರಿಕ ಚುನಾವಣೆಗಳು ಬರಲಿದೆ ಇದರಿಂದ ಸಾರ್ವಜನಿಕ ಕೆಲಸಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳೊಣ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಶಾಂತ ಎಲ್ ಹುಲ್ಮನಿ, ಆರ್.ಟಿ.ಓ ಅಧಿಕಾರಿ ವಿವೇಕನಂದ, ಜಿಲ್ಲಾಧಿಕಾರಿಗಳ ಕಛೇರಿ ಸಹಾಯಕ ಸ್ವಾಮಿಗೌಡ, ಕಂದಾಯ ಇಲಾಖೆಯ ನೌಕರರ ಸಂಘದ ಎಲ್ಲಾ ಪಧಾಧಿಕಾರಿಗಳು ಉಪಸ್ಥಿತರಿದ್ದರು.




