ಇಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಿಯಾಂಕಾ ಗಾಂಧಿ : ರಾಜ್ಯ ಮಹಿಳಾ ಕಾಂಗ್ರೆಸ್ ಭರ್ಜರಿ ತಯಾರಿ

ಬೆಂಗಳೂರು: ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ‘ನಾ ನಾಯಕಿ’ ಸಮಾವೇಶ ಆಯೋಜನೆ ಮಾಡಲಾಗಿದ್ದು,12.30ಕ್ಕೆ ಸಮಾವೇಶ ಆರಂಭವಾಗಲಿದೆ. 11 ಗಂಟೆಗೆ ದೆಹಲಿಯಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ವಿಮಾನ ನಿಲ್ದಾಣದಿಂದ ನೇರವಾಗಿ ಅರಮನೆ ಮೈದಾನಕ್ಕೆ ಆಗಮಿಸಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಇಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಿಯಾಂಕಾ ಗಾಂಧಿ

ಅರಮನೆ ಮೈದಾನದಲ್ಲಿ ಇಂದು ಕಾಂಗ್ರೆಸ್ ಸ್ತ್ರೀ ಶಕ್ತಿ ಪ್ರದರ್ಶನ ನಡೆಯಲಿದ್ದು, ಈಗಾಗಲೇ ಸಾವಿರಾರು ಮಹಿಳೆಯರು ಆಗಮಿಸಿದ್ದಾರೆ. ಒಟ್ಟು ಒಂದು ಲಕ್ಷಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತೆಯರು ಭಾಗಿಯಾಗಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಸಿ ವೇಣುಗೋಪಾಲ್, ರಂದೀಪ್ ಸುರ್ಜೇವಾಲ ಭಾಗಿಯಾಗಲಿದ್ದಾರೆ.
ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ತಯಾರಿ ಮಾಡಲಾಗುವುದು. ರಾಜ್ಯದಲ್ಲಿ 2.5 ಕೋಟಿ ಮಹಿಳಾ ಮತದಾರರನ್ನು ಸೆಳೆಯಲು ‘ನಾ ನಾಯಕಿ’ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ.

ಅಂಬಿಗರ ಚೌಡಯ್ಯ ಕಟುಸತ್ಯವನ್ನು ನುಡಿಯುವ ಶರಣರು : ಸಿಎಂ ಬೊಮ್ಮಾಯಿ

ಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ: ಸಿಎಂ ಬೊಮ್ಮಾಯಿ

About The Author