ಬೆಂಗಳೂರು: ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಪಟ್ಟಿ ಪ್ರಕಟವಾಗಿದ್ದು, ಈ ಸಮಯದಲ್ಲಿ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ 60 ಸಾವಿರ ಶಿಕ್ಷಕರನ್ನ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಬಳಸಿಕೊಳ್ಳಲು ಮುಂದಾಗಿದೆ. ಹೀಗಾಗಿ ಶಿಕ್ಷಣ ಇಲಾಖೆ ವಿರುದ್ಧ ವಿಧಾನ ಪರಿಷತ್ ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದು, ಬಿಬಿಎಂಪಿ, ಇತರೆ ಪಾಲಿಕೆಗಳು ಹಾಗೂ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಚುನಾವಣೆಯ ಆಯೋಗದ ನಿರ್ದೇಶನದ ಕಾರಣ ನೀಡಿ ಚುನಾವಣೆಯ ತರಬೇತಿಗೆ ಪ್ರೌಢಶಾಲಾ ಶಿಕ್ಷಕರು ಹಾಗೂ ಪ್ರಾಥಮಿಕ ಶಾಲೆಯ ಶಿಕ್ಷಕರನ್ನ ಕಡ್ಡಾಯವಾಗಿ ಬಳಕೆ ಮಾಡಿಕೊಳ್ಳಲು ಮುಂದಾಗಿದೆ.
ಬಜೆಟ್ 2023: ಮಧ್ಯಮ ವರ್ಗದ ಸಮಸ್ಯೆಗಳ ಕುರಿತು ನಿರ್ಮಲಾ ಸೀತಾರಾಮನ್ ಹೇಳಿದ್ದು ಹೀಗೆ..
ರಾಜ್ಯದಲ್ಲಿ ಈಗಾಗಲೇ ಶಿಕ್ಷಕರ ಕೊರತೆ ಇದ್ದು, ಪರೀಕ್ಷೆ ಸಮಯದಲ್ಲಿ ಇಂತಹ ನಿರ್ಧಾರದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಯಾವುದೇ ಕಾರಣಕ್ಕೂ ಶಿಕ್ಷಕರ ಬಳಕೆಗೆ ಅವಕಾಶ ನೀಡದಂತೆ ಕ್ರಮವಹಿಸುವಂತೆ ಶಿಕ್ಷಣ ಸಚಿವರಿಗೆ ವಿಧಾನ ಪರಿಷತ್ ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ಸೇರಿ ಪತ್ರ ಬರೆದಿದ್ದಾರೆ. ಶಿಕ್ಷಕರನ್ನು ಚುನಾವಣೆ ಕೆಲಸಕ್ಕೆ ಬಳಸದಂತೆ ಸುತ್ತೋಲೆ ನೀಡುಲು ಶಿಕ್ಷಕರ ಸಂಘ ಒತ್ತಾಯಿಸಿದೆ.