Sunday, April 27, 2025

Latest Posts

ಸಾಗರ ಕ್ಷೇತ್ರದ ಮಾಜಿ ಶಾಸಕ ಎಲ್ ಟಿ ತಿಮ್ಮಪ್ಪ ಹೆಗಡೆ ವಿಧಿವಶ

- Advertisement -

ಶಿವಮೊಗ್ಗ: ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಲ್​.ಟಿ. ತಿಮ್ಮಪ್ಪ ಹೆಗಡೆ (94) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಿಮ್ಮಪ್ಪ ಅವರು ಸಾಗರ ತಾಲೂಕಿನ ಲಿಂಗದಹಳ್ಳಿ ಬಳಿಯ ಮಡಸೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಎಲ್​.ಟಿ. ತಿಮ್ಮಪ್ಪ ಹೆಗಡೆ ಅವರು ಎರಡೂ ಬಾರಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. 1978 ಹಾಗೂ 1983ರ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು. ತಿಮ್ಮಪ್ಪ ಅವರ ಸ್ವಗ್ರಾಮದಲ್ಲಿ ಇಂದು ಅಂತ್ಯಕ್ರಿಯೆ ನೆರವೇರಲಿದೆ.

ಅಧಿವೇಶನದ ಬಳಿಕ ನಾಲ್ಕು ಕಡೆ ರಥಯಾತ್ರೆ : ಸಿಎಂ ಬೊಮ್ಮಾಯಿ

ಇವರು ಸಾಗರ ಪ್ರಾಂತ್ಯದಲ್ಲಿ ಅಡಿಕೆ ಬೆಳೆಗಾರರ ಸಂಘ ಸ್ಥಾಪನೆ, ಅಂತರರಾಜ್ಯ ಸಂಸ್ಥೆ ಕ್ಯಾಂಪ್ಕೋ, ಸಾಗರದ ಆಪ್ಸ್‌ಕೋಸ್‌ನಂತಹ ಸಂಸ್ಥೆಗಳನ್ನು ಹುಟ್ಟು ಹಾಕುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದರು. ಸಾಗರದ ಆಪ್ಸ್‌ಕೋಸ್, ತೋಟಗಾರ್ಸ್, ಅಡಿಕೆ ಬೆಳೆಗಾರರ ಸಂಘಗಳ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಎಲ್.ಟಿ.ತಿಮ್ಮಪ್ಪ ಹೆಗಡೆ ಅವರು ಕ್ಯಾಂಪ್ಕೋ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದರು.‌ ಎಲ್.ಟಿ.ತಿಮ್ಮಪ್ಪ ಹೆಗಡೆ ಅವರು ತಮ್ಮ ಸಹೋದರ ಗಣಪತಿ ಹೆಗಡೆ, ಪತ್ನಿ ಸಾವಿತ್ರಮ್ಮ, ಪುತ್ರರಾದ ತಿಮ್ಮಪ್ಪ ಹಾಗೂ ಅಶೋಕ, ಸೊಸೆ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಾಂಧವರನ್ನು ಅಗಲಿದ್ದಾರೆ.

- Advertisement -

Latest Posts

Don't Miss