ವಿಶ್ವವಿದ್ಯಾಲಯಗಳ ವಿದ್ಯಾರ್ಥಿನಿಯರಿಗೂ ಋತುಚಕ್ರದ ರಜೆ ವಿಸ್ತರಣೆ ಮಾಡಿದ ಕೇರಳ ಸರ್ಕಾರ

ತಿರುವನಂತಪುರಂ: ಕೇರಳ ಸರ್ಕಾರದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಇನ್ಮುಂದೆ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆಯನ್ನು ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ. ಕೇರಳದ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಮೊಟ್ಟ ಮೊದಲ ಬಾರಿಗೆ ಋತುಚಕ್ರದ ರಜೆ ನೀಡಲು ನಿರ್ಧರಿಸಲಾಗಿತ್ತು. ಇದೀಗ ಈ ಸೌಲಭ್ಯವನ್ನು ಉನ್ನತ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ.

ಗಾಯಕರ ಮೇಲೆ ಹಣ ಸುರಿದ ಬಿಜೆಪಿ ನಾಯಕರು…!

ಈ ಬಗ್ಗೆ ಮಾಹಿತಿ ನೀಡಿರುವ ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು, ಸರ್ಕಾರದ ಅಧೀನಕ್ಕೆ ಒಳಪಡುವ ಎಲ್ಲ ವಿಶ್ವವಿದ್ಯಾಲಯಗಳ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆಯನ್ನು ಒದಗಿಸುವ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಮುಟ್ಟಿನ ಸಮಯದಲ್ಲಿ ವಿದ್ಯಾರ್ಥಿನಿಯರು ಎದುರಿಸುವ ಮಾನಸಿಕ ಮತ್ತು ದೈಹಿಕ ತೊಂದರೆಗಳನ್ನು ಪರಿಗಣಿಸಿ, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಮುಟ್ಟಿನ ರಜೆಯನ್ನು ಜಾರಿಗೆ ತರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಯತ್ನಾಳ್‌ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ನೋಟೀಸ್

ಕಳೆದ 24 ಗಂಟೆಗಳಲ್ಲಿ ನನ್ನ ಮೇಲೆ 2 ಬಾರಿ ದಾಳಿಗೆ ಯತ್ನ : ಬಿಹಾರ ಸಿಎಂ ವಿರುದ್ಧ ಹರಿಹಾಯ್ದ ಅಶ್ವಿನಿ ಚೌಬೆ

About The Author