Political News:
ತನ್ನ ಹೊಟ್ಟೆಪಾಡಿಗಾಗಿ ಮಹಿಳೆಯೊಬ್ಬಳು ತನ್ನ ಮೈ ಮಾರಾಟ ಮಾಡಿಕೊಂಡಾಗ ಆಕೆಯನ್ನು ವೇಶ್ಯೆ ಎಂದು ಕರೆಯುತ್ತೇವೆ. ತಮ್ಮನ್ನು ಮಾರಾಟ ಮಾಡಿಕೊಂಡಿರುವ ಶಾಸಕರಿಗೆ ಏನೆಂದು ಹೇಳುತ್ತೀರಿ?’ ಎಂದು ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಪ್ರಶ್ನಿಸಿದರು. ಕಾಂಗ್ರೆಸ್ ನ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತ್ನಾಡಿದ ಹರಿಪ್ರಸಾದ್, ಸ್ಥಳೀಯ ಶಾಸಕರಿಗೆ ಬುದ್ಧಿ ಕಲಿಸಬೇಕಿದೆ. ತಮ್ಮ ಸ್ವಾಭಿಮಾನ ಮಾರಾಟ ಮಾಡಿರುವ ಶಾಸಕನಿಗೆ ಬರುವ ಚುನಾವಣೆಯಲ್ಲಿ ಬುದ್ಧಿ ಕಲಿಸಬೇಕು ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಹೆಸರು ಪ್ರಸ್ತಾಪಿಸದೇ ಹೇಳಿದರು.
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ನಾಯಕರು ರಿಯಾಕ್ಟ್ ಮಾಡಿದ್ದು, ಆಕ್ರೋಶ ಹೊರಹಾಕಿದ್ದಾರೆ. ವೇಶ್ಯೆಯರು ನಾವಲ್ಲ, ಅಂದು ಕಾಂಗ್ರೆಸ್‌ನಲ್ಲಿ ಶಾಸಕರಾಗಿದ್ದ ನಮ್ಮ ಅಭಿಪ್ರಾಯ ಆಲಿಸದೆ ಸಮ್ಮಿಶ್ರ ಸರ್ಕಾರ ರಚಿಸಲು ಎಚ್.ಡಿ.ಕುಮಾರಸ್ವಾಮಿ ಮುಂದೆ ಕರೆದುಕೊಂಡು ಹೋಗಿ ನಿಲ್ಲಿಸಿದವರಿಗೆ ಈ ಮಾತು ಅನ್ವಯಿಸಲಿದೆ’ಸಚಿವ ಮುನಿರತ್ನ ತಿರುಗೇಟು ನೀಡಿದರು. ‘೧೭ ಜನರನ್ನು ವೇಶ್ಯೆಯರು ಎಂದು ಕರೆದಿರುವ ಬಿ.ಕೆ.ಹರಿಪ್ರಸಾದ್ ಅವರಿಗೆ ರಾಜಕೀಯದ ಚಿತ್ರಣ ಸರಿಯಾಗಿ ಗೊತ್ತಿಲ್ಲ. ಮಾಹಿತಿ ಇದ್ದಿದ್ದರೆ ಈ ಪದ ಬಳಕೆ ಮಾಡುತ್ತಿರಲಿಲ್ಲ. ಕಾಂಗ್ರೆಸ್ಸಿಗರಿಗೂ ಸ್ಯಾಂಟ್ರೊ ರವಿಗೂ ಯಾವುದೇ ವ್ಯತ್ಯಾಸವೇ ಇಲ್ಲ’ ಎಂದು ಮುನಿರತ್ನ ಆಕ್ರೋಶ ಹೊರಹಾಕಿದ್ರು. ಈ ಪದ ನಮ್ಮ ೧೭ ಜನರಿಗೆ ಅನ್ವಯಿಸುವುದಿಲ್ಲ. ನಾವು ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ ಗೆದ್ದಿದ್ದೇವೆ. ಜನ ನಮ್ಮನ್ನು ಆಯ್ಕೆ ಮಾಡಿದ್ದು, ಇಂಥ ಪದ ಬಳಸಬಾರದು’ ಎಂದು ವಾಗ್ದಾಳಿ ನಡೆಸಿದರು.
ಇದೇ ವೇಳೆ, ತಮ್ಮದು ರೌಡಿ ಮತ್ತು ಗೂಂಡಾಗಳ ಪಕ್ಷವೆಂದು ಸ್ವತಃ ಬಿಜೆಪಿಯವರೇ ಒಪ್ಪಿಕೊಂಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್‌ದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ. ಹೊಸಪೇಟೆಯಲ್ಲಿ ಪ್ರಜಾಧ್ವನಿ ಯಾತ್ರೆ ಉದ್ದೇಶಿಸಿ ಮಾತನಾಡಿದ ಸುರ್ಜೇವಾಲ, ಬಿಜೆಪಿ ಶಾಸಕ ಸಿ.ಪಿ ಯೋಗೇಶ್ವರ್ ದೇಶದ ಗೃಹಮಂತ್ರಿ ಅಮಿತ್ ಶಾ ಅವರನ್ನು ಗೂಂಡಾ ಎಂದು ಹೇಳಿದ್ದಾರೆ. ರೌಡಿ, ಗೂಂಡಾಗಳ ಪಾರ್ಟಿ ಎಂದು ಅವರೇ ಒಪ್ಪಿಕೊಂಡಿದ್ದರೇ, ಅವರು ಒಂದು ಕ್ಷಣವೂ ಅಧಿಕಾರಿದಲ್ಲಿ ಇರಬಾರದು ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಅವರಿಗೆ ತಿಳಿದಿದೆ, ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ : ಆರಗ ಜ್ಞಾನೇಂದ್ರ