Film News:
ಬಾಲಿವುಡ್ ನಟಿ ಹಾಗೂ ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈಗೆ ನಾಸಿಕ್ ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದೆ. ನಾಸಿಕ್ನಲ್ಲಿ ಖರೀದಿ ಮಾಡಿದ ಭೂಮಿಗೆ ತೆರಿಗೆ ಪಾವತಿ ಮಾಡದ ಹಿನ್ನಲೆಯಲ್ಲಿ ಅವರಿಗೆ ಜಿಲ್ಲಾಡಳಿತದ ವತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಐಶ್ವರ್ಯಾ ರೈ ನಾಸಿಕ್ನಲ್ಲಿ ಸಣ್ಣ ಪ್ರಮಾಣದ ಭೂಮಿಯನ್ನು ಹೊಂದಿದ್ದಾರೆ. ಕಳೆದ ಒಂದು ವರ್ಷದಿಂದ ಇದರ ತೆರಿಗೆ ಪಾವತಿಯನ್ನು ಮಾಡಿಲ್ಲ. ಹೀಗಾಗಿ, ಜಿಲ್ಲಾಡಳಿತದ ಸಂಬಂಧಪಟ್ಟ ಅಧಿಕಾರಿಗಳು ಇದೀಗ ಪ್ರಕರಣದಲ್ಲಿ ನಟಿಗೆ ನೋಟಿಸ್ ಕಳುಹಿಸಿದ್ದಾರೆ. ವರದಿಗಳ ಪ್ರಕಾರ, ಐಶ್ವರ್ಯಾ ಅವರು ಸಿನ್ನಾರ್ನ ತಂಗಾವ್ ಬಳಿಯ ನಾಸಿಕ್ನ ಅಡ್ವಾಡಿಯಲ್ಲಿ ಆಸ್ತಿ ಹೊಂದಿದ್ದಾರೆ. ಅವರು ಈ ಪ್ರದೇಶದಲ್ಲಿ ಸುಮಾರು ಒಂದು ಹೆಕ್ಟೇರ್ ಭೂಮಿಯನ್ನು ಹೊಂದಿದ್ದಾರೆಂದು ವರದಿಯಾಗಿದೆ. ಹಲವಾರು ಸೂಚನೆಗಳ ಹೊರತಾಗಿಯೂ ಕಳೆದ ಮೌಲ್ಯಮಾಪನ ವರ್ಷದಿಂದ ಈ ಭೂಮಿಗೆ ತೆರಿಗೆ ಪಾವತಿಸಲಾಗಿಲ್ಲ ಎಂದು ವರದಿಗಳು ತಿಳಿಸಿವೆ. ಇದರ ಪರಿಣಾಮವಾಗಿ ಸಿನ್ನಾರ್ ತಹಸೀಲ್ದಾರ್ ಇದೀಗ ನಟಿಗೆ ನೋಟಿಸ್ ಕಳುಹಿಸಿದ್ದಾರೆ ಎಂದು ವರದಿ ತಿಳಿಸಿದೆ.
ಕೊನೆಯ ಹಂತದ ಚಿತ್ರೀಕರಣದಲ್ಲಿ ‘ಧೀರ ಭಗತ್ ರಾಯ್’ – ಫೆಬ್ರವರಿಯಲ್ಲಿ ಚಿತ್ರದ ಆಡಿಯೋ ಹಾಗೂ ಟ್ರೇಲರ್ ಬಿಡುಗಡೆ