- Advertisement -
Political news :
ಜನವರಿ 23ರಿಂದ ಸಿಎಂ ನೇತೃತ್ವದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ. ಎಲ್ಲಾ ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿಯವರು ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಜ.23, 24 & 25ರಂದು 3 ದಿನ ಬಜೆಟ್ ಪೂರ್ವಭಾವಿ ಸಭೆ ನಿಗದಿಯಾಗಿದ್ದು 30ಕ್ಕೂ ಹೆಚ್ಚು ಇಲಾಖೆಗಳ ಜೊತೆ ಚರ್ಚಿಸಿ ಫೆ.17ರಂದು ಬಜೆಟ್ ಮಂಡಿಸಲು ಸಿಎಂ ಬೊಮ್ಮಾಯಿ ಸಿದ್ಧತೆ ನಡೆಸಿದ್ದಾರೆ.
ಇನ್ನು ಬಜೆಟ್ ಪೂರ್ವಭಾವಿ ಸಭೆಯ ನಿತ್ಯ ಬೆಳಗ್ಗೆ 10.30ರಿಂದ ಸಂಜೆ 6 ಗಂಟೆವರೆಗೂ ನಡೆಯಲಿವೆ. ಸಭೆಗೆ ನಿಗದಿತ ದಿನ ಹಾಗೂ ಸಮಯದಲ್ಲಿ ಆಯಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಅವಶ್ಯಕ ಮಾಹಿತಿಗಳು ಹಾಗೂ ಪ್ರಾತ್ಯಕ್ಷಿಕೆಯೊಂದಿಗೆ ಹಾಜರಾಗಲು ಆರ್ಥಿಕ ಇಲಾಖೆ ಸೂಚಿಸಿದೆ.
- Advertisement -