Mandya News:
ಭಾರತದ ಸಂವಿಧಾನದಲ್ಲಿ ಲಿಂಗ ತಾರತಮ್ಯ ವಿಲ್ಲದೆ ಎಲ್ಲರಿಗೂ ಮತದಾನದ ಹಕ್ಕು ಕಲ್ಪಿಸಿದೆ. ಯಾವುದೇ ಅಮಿಷಕ್ಕೆ ಒಳಗಾಗದೆ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಿ ಮತದಾನದ ಮಹತ್ವ ಅರಿಯಿರಿ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ ನಳಿನಿಕುಮಾರಿ ಅವರು ತಿಳಿಸಿದರು.
ಕಲಾಮಂದಿರದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟನೆ ಮಾಡಿ ಅವರು ಮಾತನಾಡಿದರು.ಇಂದಿನ ಯುವಕರಲ್ಲಿ ನಾವು ಏಕೆ ಮತದಾನ ಮಾಡಬೇಕು, ಮತದಾನ ಅನ್ನೊದು ಎಷ್ಟು ಮುಖ್ಯ ಅನ್ನೊದೆ ತಿಳಿಯದೇ ಇರುವುದು ದುರದೃಷ್ಟಕರ ಸಂಗತಿ ಎಂದರು.
ಮತದಾರರು ಜಾಗೃತರಾಗಬೇಕು. ಪ್ರತಿಯೊಬ್ಬ ಅರ್ಹ ಮತದಾರರಿಗೆ ಮತದಾನದ ಹಕ್ಕು ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಮತದಾನಕ್ಕಿಂತ ಇನ್ನೊಂದಿಲ್ಲ ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಲು ತಪ್ಪದೇ ಯುವ ಮತದಾರರ ಮತದಾನ ಮಾಡಿ ಎಂದರು. ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಮಾತನಾಡಿ ಮಂಡ್ಯದಲ್ಲಿ ಎಲ್ಲಾ ಚುನಾವಣೆಯಲ್ಲೂ ಶೇ.80 ರಿಂದ 85 ಮತದಾನವಾಗುತ್ತಿದೆ. ಕಳೆದ ಒಂದು ವರ್ಷದಲ್ಲಿ 19 ರಿಂದ 20 ಸಾವಿರ ಮಂದಿ ಯುವ ಮತದಾರರನ್ನು ಮತದಾರರ ಪಟ್ಟಿ ಸೆರಿಸಿದ್ದೇವೆ. ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಲು ಇನ್ನೂ ಕಾಲಾವಕಾಶ ಇದೆ ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ ಎಂದರು.
ಪ್ರಜಾಪ್ರಭುತ್ವಕ್ಕೆ ಚುನಾವಣೆ ಒಂದು ಪ್ರಮುಖ ಅಸ್ತ್ರ. ಅದ್ದರಿಂದ ಯುವಕರೆಲ್ಲರೂ ಮತದಾನ ಮಾಡಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದರ ಮೂಲಕ ಪ್ರಜಾಪ್ರಭುತ್ವ ಸಮಾಜ ಕಟ್ಟಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು ಅವರು ತಿಳಿಸಿದರು. ಇದಕ್ಕೂ ಮುನ್ನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ್ ಎಲ್ ಹುಲ್ಮನಿ ಅವರು ಮತದಾರರ ಪ್ರತಿಜ್ಞಾ ವಿಧಿ ಭೋದಿಸಿದರು.
ಕಾರ್ಯಕ್ರಮದಲ್ಲಿ 120 ವರ್ಷ ತುಂಬಿದ ರಾಧಾಬಾಯಿ ಹಾಗೂ ನಿಂಗಮ್ಮ ಅವರಿಗೆ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಸನ್ಮಾನಿಸಿದರು. ಮತದಾರರ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಮಂಡ್ಯ ಉಪವಿಭಾಗಧಿಕಾರಿ ಎಸ್.ಹೆಚ್ ಕೀರ್ತನ, ತಹಾಶೀಲ್ದಾರ್ ಕುಂಞ ಅಹಮದ್ ಎನ್.ಎ, ನಗರಸಭೆ ಪೌರಯುಕ್ತರಾದ ಮಂಜುನಾಥ್ ಆರ್ ಹಾಜರಿದ್ದರು.
ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗೌರವ ಸಮರ್ಪಣೆ
ಶ್ರಿ ರಂಗ ಪಟ್ಟಣದ ರಂಗನಾಥ ಸ್ವಾಮಿ ದರ್ಶನ ಪಡೆದ ನೂತನ ಉಸ್ತುವಾರಿ ಸಚಿವ ಆರ್ ಅಶೋಕ್