- Advertisement -
National News:
ಉತ್ತರ ಸೊಮಾಲಿಯಾದಲ್ಲಿನ ರ‍್ವತ ಗುಹೆಯ ಕಣಿವೆಯಂತಹ ಸಂಕೀರ್ಣ ಪ್ರದೇಶದಲ್ಲಿ ಅಮೆರಿಕ ಸೇನೆ ಐಸಿಸ್ ಅಡಗುತಾಣದ ಮೇಲೆ ಈ ದಾಳಿ ಮಾಡಿದ್ದು ಈ ವೇಳೆ ಬಿಲಾಲ್ ಸೇರಿದಂತೆ ಕನಿಷ್ಠ ೧೦ ಮಂದಿ ಉಗ್ರರು ಹತರಾಗಿದ್ದಾರೆ. ಆದರೆ ಕಾರ್ಯಾಚರಣೆಯಲ್ಲಿ ಯಾವುದೇ ಅಮೆರಿಕ ಸೇನೆಯಲ್ಲಿ ಸಾವುನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಲಾಲ್ ಆಫ್ರಿಕಾದಾದ್ಯಂತ ತನ್ನ ಉಗ್ರ ಚಟುವಟಿಕೆಗಳನ್ನು ಯೋಜಿಸುತ್ತಿದ್ದ. ಇದೀಗ ಉಗ್ರ ಸಂಘಟನೆಯ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಡೆನ್ ಆಡಳಿತದ ಇಬ್ಬರು ಹಿರಿಯ ಅಧಿಕಾರಿಗಳು ಗುರುವಾರ ತಡರಾತ್ರಿ ಈ ಮಾಹಿತಿ ನೀಡಿದ್ದಾರೆ. ಈ ಸೇನಾ ಕಾರ್ಯಾಚರಣೆಗೆ ಈ ವಾರ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- Advertisement -