Thursday, October 23, 2025

Latest Posts

ಸಹಾಯಕ ಸಬ್ ಇನ್ಸ್‌ಪೆಕ್ಟರ್‌ ನಿಂದಲೇ ಸಚಿವರ ಮೇಲೆ ಗುಂಡಿನ ದಾಳಿ…!

- Advertisement -

National News:

ಒಡಿಶಾದ ಆರೋಗ್ಯ ಸಚಿವರ ಎದೆ ಮೇಲೆ ೨ ಬಾರಿ ಗುಂಡು ಹಾರಿಸಿರುವ ಆಘಾತಕಾರಿ ಘಟನೆ ಒಡಿಶಾದ ಜರ‍್ಸುಗುಡಾ ಜಿಲ್ಲೆಯ ಬ್ರಜರಾಜನಗರ ಬಳಿಯ ಗಾಂಧಿ ಚೌಕ್ ಬಳಿ ನಡೆದಿದೆ. ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಅಲ್ಲದೆ, ಸ್ವತ: ಸಹಾಯಕ ಸಬ್ ಇನ್ಸ್‌ಪೆಕ್ಟರ್‌ ಸಚಿವ ನಬಾ ಕಿಶೋರ್‌ ದಾಸ್‌ ಅವರಿಗೆ ಗುಂಡು ಹಾರಿಸಿರುವ ಆರೋಪ ಕೇಳಿಬಂದಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಗುಂಡಿನ ದಾಳಿ ನಡೆಸಿದ್ದು, ಸಚಿವರ ಎದೆಗೆ ಗುಂಡು ತಗುಲಿದೆ. ಪೊಲೀಸ್ ಅಧಿಕಾರಿ ಎರಡು ಸುತ್ತು ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡ ಸಚಿವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಅವರನ್ನು ವಿಮಾನದಲ್ಲಿ ಭುವನೇಶ್ವರಕ್ಕೆ ಏರ್‌ಲಿಫ್ಟ್‌ ಮಾಡಲಾಗಿದೆ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇನ್ನೊಂದೆಡೆ, ಈ ಘಟನೆಯ ನಂತರ ಬ್ರಜರಾಜನಗರ ಪಟ್ಟಣದಲ್ಲಿ ಉದ್ವಿಗ್ನತೆ ಉಂಟಾಗಿತ್ತು, ನಬಾ ಕಿಶೋರ್‌ ದಾಸ್ ಅವರ ಬೆಂಬಲಿಗರು ಭದ್ರತಾ ಲೋಪವನ್ನು ಪ್ರಶ್ನಿಸಿದ್ದಾರೆ. ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಕೆಲವರು ಆರೋಪ ಮಾಡಿದ್ದಾರೆ.

ಮನಕೀ ಬಾತ್ ನಲ್ಲಿ ಸಿರಿಧಾನ್ಯಗಳ  ಮಹತ್ವ ಸಾರಿದ ನಮೋ..!

ಯೂಟ್ಯೂಬ್ ನೋಡಿ ನಕಲಿ ನೋಟು ತಯಾರಿಸಿದಾತ ಅಂದರ್…!

“ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ”: ಅಮಿತ್ ಶಾ

 

- Advertisement -

Latest Posts

Don't Miss