Friday, October 17, 2025

Latest Posts

ಪ್ರಹ್ಲಾದ್ ಜೋಷಿಗೆ ಸಿಎಂ ಆಗುವ ಅರ್ಹತೆಯಿದೆ: ಸಚಿವ ಅಶ್ವಥ್ ನಾರಾಯಣ್ ಕಿಡಿ

- Advertisement -

Political News
ಬೆಂಗಳೂರು(ಫೆ.7): ರಾಜ್ಯರಾಜಕಾರಣದಲ್ಲಿ ಈಗಾಗಲೇ ಚುನಾವಣಾ ಪ್ರಚಾರ ಕಾರ್ಯಗಳು ಹೆಚ್ಚಾಗುತ್ತಲೇ ಸಾಗುತ್ತಿವೆ. ಈ ಹಿನ್ನಲೆಯಲ್ಲಿ ಇದೀಗ ರಾಜಕೀಯ ವ್ಯಕ್ತಿಗಳ ಮಧ್ಯೆಯೇ ಜಟಾಪಟಿಗಳು ಕಂಡುಬರುತ್ತಿದೆ. ಈ ಹಿನ್ನಲೆಯಲ್ಲಿ ಇತ್ತೀಚೆಗೆ ಮಾಜಿ ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರು ನೀಡಿದ ಹೇಳಿಕೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಾ ಇದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮುದಾಯದ ಪ್ರಲ್ಹಾದ್​ ಜೋಶಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜೋಷಿ ಕುರಿತಾಗಿ ನೀಡಿದ ಹೇಳಿಕೆಗೆ ಸಚಿವ ಅಶ್ವಥ್ ನಾರಾಯಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಕ್ಷಮೆಯಾಚನೆಗೆ ಒತ್ತಾಯ ಪಡಿಸಿದ್ದಾರೆ. ಪ್ರಹ್ಲಾದ್ ಜೋಷಿ ಸಿಎಂ ಆಗುವ ಅರ್ಹತೆ ಇದೆ ಎಂದು ತನ್ನ ಆಕ್ರೋಶವನ್ನು ಮಾಧ್ಯಮದವರಿಗೆ ತಿಳಿಸಿದರು.

ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ತೀವ್ರವಾದಂತಹ ಟೀಕೆಗಳು  ಕೂಡ ವ್ಯಕ್ತವಾಗುತ್ತಿದ್ದು, ಮಾತಿನ ಸಮರ ನಡೆಯುತ್ತಿದೆ. ಇದೀಗ ತನ್ನ ಹೇಳಿಕೆಯ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ತಮ್ಮ ಹೇಳಿಕೆ ಸಂಬಂಧ ಸ್ಪಷ್ಟನೆ ನೀಡಿದ್ದು, ಬ್ರಾಹ್ಮಣರು ಮುಖ್ಯಮಂತ್ರಿಯಾಗುವುದನ್ನು ನಾನು ವಿರೋಧಿಸುವುದಿಲ್ಲ ಎಂದಿದ್ದಾರೆ. ಮರಾಠ ಪೇಶ್ವೆಗಳ ಡಿಎನ್ಎ ಇರುವ ವ್ಯಕ್ತಿಯನ್ನು ಕರ್ನಾಟಕಕ್ಕೆ ಮುಖ್ಯಮಂತ್ರಿ ಮಾಡಲು ಬಿಜೆಪಿ ಮತ್ತು ಆರ್’ಎಸ್ಎಸ್ ಹೊರಟಿವೆ ಎಂದು ಹೇಳಿದ್ದೆನೆಯೇ ಹೊರತು ರಾಜ್ಯದ ಬ್ರಾಹ್ಮಣ ಸಮುದಾಯವನ್ನು ನಾನೆಲ್ಲೂ ನಿಂದಿಸಿಲ್ಲ ಎಂದರು.

ಕುಮಾರಸ್ವಾಮಿ ಹೇಳಿಕೆಯ ಕುರಿತಾಗಿ ರಾಜಕೀಯ ರಂಗದ ವಿವಿಧ ವಲಯಗಳಲ್ಲಿ ಟೀಕೆಗಳ ಮಹಾಪೂರವೇ ಹರಿದು ಬರುತ್ತಿದ್ದು, ಸಿಎಂ ಹೆಚ್​​.ಡಿ. ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಾಯಕರು, ಸಮುದಾಯದವರು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ನಟ ಹೋರಾಟಗಾರ ಚೇತನ್, ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ಟೀಕಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

Latest Posts

Don't Miss