State News:
Feb:28: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಗೆ ಬಹುದೊಡ್ಡ ಶಾಕ್ ಎದುರಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್‌ಗೆ ಮೈಸೂರು ಭಾಗದಿಂದ ಬಿಗ್ ಶಾಕ್ ತಗುಲಿದೆ. ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ. ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯ ತುಂಬಾ ಏರುಪೇರಾಗಿದೆ. ಮೊದಲಿನಂತೆ ನಾನು ಮಾನಸಿಕ ಹಾಗೂ ದೈಹಿಕವಾಗಿಯೂ ಶಕ್ತಿಯುತವಾಗಿಲ್ಲ. ಹಾಗಾಗಿ ನನಗೆ ಟಿಕೆಟ್ ಬೇಡ. ಆದ್ರೆ ಕಾಂಗ್ರೆಸ್‌ನಲ್ಲೇ ಇರುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ತನ್ವೀರ್ ಸೇಠ್ ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕರು. ಕರ್ನಾಟಕದ ಮುಸ್ಲಿಂ ಸಮುದಾಯಕ್ಕೆ ಸೇರಿದ ರಾಜಕೀಯ ನಾಯಕರಲ್ಲಿ ಒಬ್ಬರು. 2018ರ ಚುನಾವಣೆಯಲ್ಲಿ 62,268 ಮತಗಳನ್ನು ಪಡೆದು ಜಯಗಳಿಸಿದ್ದಾರೆ. 1996-2001 ಪಕ್ಷೇತರ ಅಭಿವೃದ್ಧಿಯಾಗಿ ಮೈಸೂರು ಮಹಾನಗರ ಪಾಲಿಕೆ ಸದಸ್ಯರಾಗಿ ಆಯ್ಕೆಯಾದರು. ಮೈಸೂರಿನ ಬೀಡಿ ಮಜ್ದೂರ್ ಅಸೋಸಿಯೇಷನ್ ಅಧ್ಯಕ್ಷರಾಗಿ, ಕರ್ನಾಟಕ ವಕ್ಫ್ ಡೆವಲಪ್‌ಮೆಂಟ್ ಕರ‍್ಪೋರೇಷನ್ (ರಿ) ಬೆಂಗಳೂರು ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ.
ತನ್ವೀರ್ ಸೇಟ್ 2004ರಿಂದ ಸತತ 2018 ರ ವರೆಗೆ ಶಾಸಕರಾಗಿದ್ದರು.ಕಾರ್ಮಿಕ ಸಚಿವರಾಗಿ ಕಾರ್ಯ ನಿರ್ವಹಣೆ, 1996 ಪಕ್ಷೇತರ ಅಭ್ಯರ್ಥಿಯಾಗಿ ಮೈಸೂರು ಮಹಾನಗರ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿ ಗುರುತಿಸಿಕೊಂಡರು.2002 ಶಾಸಕರಾಗಿ ಮೊದಲ ಬಾರಿಗೆ ಆಯ್ಕೆಯಾದರು.ಮೂರನೇ ಬಾರಿಗೆ 2004 ಶಾಸಕರಾಗಿ ಆಯ್ಕೆಯಾಗಿದ್ದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ ನಾಯಕ, 2008 2018 ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಶಾಸಕರಾಗಿ ಆಯ್ಕೆ 2013 4ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು.
ಪ್ರತಿಭಟನೆಗೆ ಮುಂದಾಗಬಾರದು , ಸರಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಮನವಿ
ನಾಳೆ ಸರ್ಕಾರಿ ಸೇವೆ ಬಂದ್..!? ಏನೇನಿರಲಿದೆ ಏನೆಲ್ಲಾ ವ್ಯತ್ಯಯವಾಗಲಿದೆ..!?