state news
ಮಂಡ್ಯ(ಮಾ.3): ನಗರದ ಮಹಾವೀರ್ ಸರ್ಕಲ್ ಪೇಟೆ ಬೀದಿ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ರೈಲ್ವೆ ಹಳಿ LC 73 ಗೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಜೊತೆ ನಗರಸಭೆ ಅವರು ಕೈಜೋಡಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದು ಸಂಸದರಾದ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ರೈಲ್ವೆ ಅಂಡರ್ ಪಾಸ್ ಕಾಮಗಾರಿ ನಡೆಸುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಕಾಮಗಾರಿ ನಡೆಯುವ ರೈಲ್ವೆ ಹಳಿ ಎಲ್.ಸಿ-73 ಸ್ಥಳದಲ್ಲಿ ಅಗತ್ಯ ಸೂಚನಾಫಲಕಗಳನ್ನು ಅಳವಡಿಸಿ, ಸಾರ್ವಜನಿಕರಿಗೆ ಅನುವು ಮಾಡಿಕೊಡಬೇಕು ಎಂದರು.
ಸ್ಥಳದಲ್ಲಿ ಟ್ರಾಫಿಕ್ ನಿಯಂತ್ರಣ ಮಾಡುವ ಬಗ್ಗೆ ಕೈಗೊಂಡಿರುವ ಕ್ರಮಗಳು ಕುರಿತು ಪೊಲೀಸರಿಂದ ಮಾಹಿತಿ ಪಡೆದರು. ಸ್ಥಳದಲ್ಲಿ ಇರುವ ವ್ಯಾಪಾರಸ್ಥರು ಗಳಿಗೆ ಮಾಹಿತಿ ನೀಡಿ ಸ್ಥಳ ತೆರೆವು ಗೊಳಿಸಲು ದಿನ ನಿಗದಿಗೊಳಿಸುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಡಾ. ಹೆಚ್. ಎನ್ ಗೋಪಾಲಕೃಷ್ಣ ಅವರು ಮಾತನಾಡಿ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಕಾಮಗಾರಿ ಆರಂಭಕ್ಕೆ ಅಗತ್ಯ ಕ್ರಮ ಕೈಗೊಂಡು ವರದಿ ನೀಡುವಂತೆ ತಿಳಿಸಿದರು. ಸಭೆಯಲ್ಲಿ ಉಪವಿಭಾಗಾಧಿಕಾರಿ ಹೆಚ್ ಎಸ್ ಕೀರ್ತನ, ರೈಲ್ವೆ ಅಧಿಕಾರಿ ಮುರುಳಿಧರ್, ಶಿವಕುಮಾರ್, ನಗರಾಭಿವೃದ್ಧಿ ಕೋಶದ ಯೋಜನ ನಿರ್ದೇಶಕಿ ತುಷಾರಮಣಿ, ಮಂಡ್ಯ ನಗರಸಭೆ ಪೌರಯುಕ್ತ ಆರ್.ಮುಂಜುನಾಥ್ ಸೇರಿದಂತೆ ಇತರರು ಹಾಜರಿದ್ದರು.