Saturday, July 5, 2025

Latest Posts

ಮಂಡ್ಯಕ್ಕೆ ಮೋದಿ ಆಗಮನ ಹಿನ್ನೆಲೆ, ವಾಹನ ಸಂಚಾರ: ಮಾರ್ಗ ಬದಲಾವಣೆ..

- Advertisement -

ಮಾನ್ಯ ಪ್ರಧಾನ ಮಂತ್ರಿ ಅವರು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು – ಮೈಸೂರು ರಾಷ್ಟ್ರೀಯ ದಶಪಥ ರಸ್ತೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾರ್ಚ್ 12 ರಂದು ಆಗಮಿಸುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಮಾರ್ಚ್ 12 ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳನ್ನು ಈ ಕೆಳಕಂಡಂತೆ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ.

ಮೈಸೂರು ನಗರದಿಂದ ಬೆಂಗಳೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ಮೈಸೂರು -ಬನ್ನೂರು-ಕಿರುಗಾವಲು- ಮಳವಳ್ಳಿ-ಹಲಗೂರು-ಕನಕಪುರ- ಬೆಂಗಳೂರು ಮಾರ್ಗವಾಗಿ ಸಂಚರಿಸುವುದು.

ಮೈಸೂರು ನಗರದಿಂದ ತುಮಕೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ಮೈಸೂರು-ಶ್ರೀರಂಗಪಟ್ಟಣ- ಪಾಂಡವಪುರ-ನಾಗಮಂಗಲ-ಬೆಳ್ಳೂರು ಕ್ರಾಸ್ – ತುಮಕೂರು ಮಾರ್ಗವಾಗಿ ಸಂಚರಿಸುವುದು.

ತುಮಕೂರಿನಿಂದ ಮೈಸೂರಿಗೆ ಮದ್ದೂರು ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ತುಮಕೂರು-ಬೆಳ್ಳೂರುಕ್ರಾಸ್- ನಾಗಮಂಗಲ-ಪಾಂಡವಪುರ- ಶ್ರೀರಂಗಪಟ್ಟಣ ಮೈಸೂರು ಮಾರ್ಗವಾಗಿ ಸಂಚರಿಸುವುದು.

ಬೆಂಗಳೂರಿನಿಂದ ಮೈಸೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ಬೆಂಗಳೂರು-ಚೆನ್ನಪಟ್ಟಣ-ಹಲಗೂರು-ಮಳವಳ್ಳಿ-ಕಿರುಗಾವಲು-ಬನ್ನೂರು – ಮೈಸೂರು ಮಾರ್ಗವಾಗಿ ಸಂಚರಿಸುವುದು.

ಬೆಂಗಳೂರಿನಿಂದ ಮದ್ದೂರು ಮಾರ್ಗವಾಗಿ ಕೊಳ್ಳೇಗಾಲ-ಮಹದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲಾ ರೀತಿಯ ವಾಹನಗಳು ಬೆಂಗಳೂರು-ಚನ್ನಪಟ್ಟಣ- ಹಲಗೂರು-ಮಳವಳ್ಳಿ-ಕೊಳ್ಳೇಗಾಲ- ಮಹದೇಶ್ವರ ಬೆಟ್ಟ ಮಾರ್ಗವಾಗಿ ಸಂಚರಿಸುವುದು.

ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಿದೆ. ತಪ್ಪಿದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮವಹಿಸಲಾಗುವುದು ಎಂದು ಅವರು‌ ಆದೇಶದಲ್ಲಿ ತಿಳಿಸಿದ್ದಾರೆ.

‘140 ಸೀಟ್ ಬರುತ್ತೆ ಎಂದಮೇಲೆ ಯಾಕೆ ಹೆದರಬೇಕು..?’

‘ಹಾಸನಕ್ಕೆ ತಾಂತ್ರಿಕ ವಿವಿ ಕೊಡಿ ನಾವೇ ಹಾರ ಹಾಕ್ತಿವಿ’

‘ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ’

- Advertisement -

Latest Posts

Don't Miss