ಬಾಗೇಪಲ್ಲಿ :
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಸಿದ್ಧ ಮಿಟ್ಟೆಮರಿ ಶ್ರೀ ಗರುಡಾ-ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಮಲಿಂಗಪ್ಪ ಭಾಗವಹಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಇದಕ್ಕೂ ಮುನ್ನ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ವಾಸವಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನ ಕಾರ್ಯಕ್ರಮ ನಡೀತು. ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪ, ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು, ಈ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ತಜ್ಞರು, ಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನದ ರಾಜ್ಯ ಸಹ ಸಂಚಾಲಕರಾದ ವಿಶ್ವನಾಥ್ ಭಟ್, ಜಿಲ್ಲಾ ಸಂಚಾಲಕರಾದ ಡಾ.ಬಿ.ವಿ.ಕೃಷ್ಣ ಸೇರಿ ವಿವಿಧ ವಲಯದ ಪ್ರಬುದ್ಧರು, ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು ತಮ್ಮ ಸಲಹಾ ಪತ್ರವನ್ನ ಅಭಿಯಾನದ ಪೆಟ್ಟಿಗೆ ಹಾಕಿದರು.