political news
ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಪಕ್ಷದ ನಾಯಕರು ಮತದಾರರನ್ನನು ತಮ್ಮತ್ತ ಸಳೆದುಕೊಳ್ಳಲು ಹಲವಾರು ರೀತಿಯಲ್ಲಿ ಸರ್ಕಸ್ ಮಾಡುತಿದ್ದಾರೆ. ಮತದಾರರ ಮನವೊಲಿಸಲು ತಮ್ಮ ಕ್ಷೇತ್ರದ ಜನರಿಗೆ ವಿವಿಧ ರೀತಿಯಲ್ಲಿ ಉಡುಗೊರೆಯನ್ನು ನೀಡುತಿದ್ದಾರೆ. ಮಹಿಳೆಯರಿಗೆ ಸೀರೆ, ಮನೆಮನೆಗೆ ಟಿವಿ, ಭೋಜನ ಪ್ರಿಯರಿಗೆ ಬಾಡೂಟ, ಮಧ್ಯ ಪ್ರಿಯರಿಗೆ ಸರಾಯಿಯನ್ನು ನೀಡುತಿದ್ದಾರೆ.ಈ ರೀತಿಯಾಗಿ ಜನರ ಮನವೊಲಿಸಲು ಮುಂದಾಗುತಿದ್ದಾರೆ.
ಅದೇ ರೀತಿ ಬೀರೇಶ್ವರ ನಗರದಲ್ಲಿರುವ ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ಸಹ ಚುನಾವಣೆಯಲ್ಲಿ ಮತದಾರರಿಗೆ ಹಂಚಿಕೆ ಮಾಡುವುದಕ್ಕಾಗಿ ತಂದಿರುವ ಸೀರೆ ಮಕ್ಕಳಿಗಾಗಿ ಶಾಲಾ ಬ್ಯಾಗ್ ಗ್ಲಾಸ್ ತಟ್ಟೆ ತಂದು ಸಂಗ್ರಹಿಸಿಟ್ಟಿರುವ ಮನೆ ಮೇಲೆ ಐಟಿ ಇಲಾಖೆಯ ಅಧಿಕಾರಿಗಳು ಆರ್ ಶಂಕರ ಅವರ ಮನೆ ಮೇಲೆ ಮಂಗಳವಾರ ದಾಳಿ ನಡೆಸಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ವಶಪಡಿಸಿಕೊಂಡುರುವ ವಸ್ತಗಳ ಬೆಲೆ ಸುಮಾರು 8 ಕೋಟಿರೂ ಎಂದು ಅಂದಾಜಿಸಲಾಗಿದೆ
ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ– ಲೋಟ ಹಾಗೂ ಎಲ್‌ಕೆಜಿಯಿಂದ ಪದವಿ ಕಾಲೇಜುಗಳವರೆಗೆ ಹಂಚಲು ತಂದಿರುವ ಸ್ಕೂಲ್ ಬ್ಯಾಗ್‌ಗಳನ್ನು ವಶಪಡಿಸಿಕೊಂಡಿದ್ದಾರೆ.ಸುಮಾರು 30-40 ಲಕ್ಷ ಬೆಲೆಬಾಳುವ ಗೃಹಪಯೋಗಿ ವಸ್ತುಗಳು, ಮಹಿಳೆಯರಿಗಾಗಿ ವಿತರಿಸಲು 6000ಕ್ಕೂ ಹೆಚ್ಚು ಸೀರೆ, 9000 ಕ್ಕೂ ಹೆಚ್ಚು ಶಾಲಾ ಕಾಲೇಜು ಬ್ಯಾಗ್ ಗಳು ಸೇರಿದಂತೆ ತಟ್ಟೆಲೋಟಗಳನ್ನು ವಶಕ್ಕೆ ಪಡೆಯಲಾಗಿದೆ. . ಸೀಜ್ ಆಗಿರುವ ವಸ್ತುಗಳನ್ನು ಅಧಿಕಾರಿಗಳು ಪೊಲೀಸರ ವಶಕ್ಕೆ ನೀಡಿದ್ದಾರೆ. ಸುಮಾರು ಏಳು ಗಂಟೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.
ಇನ್ನು ಈ ದಾಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಐಟಿ ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮುಕ್ತ ಅವಕಾಶ ಕಲ್ಪಿಸಿದ್ದವೆ. ಇವರ ಕೆಲಸಕ್ಕೆ ನಾವು ಅಡ್ಡಿಪಡಿಸುವುದಿಲ್ಲ ಎಂದಿದ್ದಾರೆ.