Friday, November 28, 2025

Latest Posts

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ

- Advertisement -

ಮಂಡ್ಯ:

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ: ಸಚಿವ ಡಾ.ನಾರಾಯಣಗೌಡ

ಮಂಡ್ಯ: 15 ಕೋಟಿ ವೆಚ್ಚದಲ್ಲಿ ಶ್ರೀರಂಗಪಟ್ಟಣ-ಕೆಆರ್ ಪೇಟೆ- ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

ಶ್ರೀರಂಗಪಟ್ಟಣ -ಕೆಆರ್ ಪೇಟೆ-ಅರಸೀಕೆರೆ ರಸ್ತೆ ತುಂಬಾ ಹದಗೆಟ್ಟಿದ್ದರಿಂದ ಸಚಿವ ಡಾ.ನಾರಾಯಣಗೌಡ ಅವರು ಲೋಕೋಪಯೋಗಿ ಸಚಿವರ ಗಮನಕ್ಕೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದರು. ಸಚಿವ ನಾರಾಯಣಗೌಡ ಅವರು ಒತ್ತಾಯದಂತೆ ಕೆಆರ್ ಪೇಟೆ ವ್ಯಾಪ್ತಿಯಲ್ಲಿನ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 15 ಕೋಟಿ ರೂಪಾಯಿ ಬಿಡುಗಡೆ ಮಾಡಿ ಲೋಕೋಪಯೋಗಿ ಇಲಾಖೆಯಿಂದ ಆದೇಶ ಹೊರಡಿಸಲಾಗಿತ್ತು. ಟೆಂಡರ್ ಪ್ರಕ್ರಿಯೆ ಮುಗಿದು ಇಂದು ಡಾಂಬರೀಕರಣ ಆರಂಭವಾಗಿದ್ದು, ಶೀಘ್ರದಲ್ಲೇ ಮುಕ್ತಾಯಗೊಳಿಸಲಾಗುತ್ತದೆ.

ಇದರ ಜೊತೆಗೆ ಶ್ರೀರಂಗಪಟ್ಟಣ to ಅರಸೀಕೆರೆ ನಡುವಿನ ಚತುಷ್ಪತ ರಸ್ತೆಗೆ ಅಭಿವೃದ್ಧಿಗೊಳಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚಿಸಲಾಗಿದೆ. ಅದು ನೀತಿ ಆಯೋಗದ ಕ್ರಮ ಸಂಖ್ಯೆ 67 ರಲ್ಲಿ ಇದ್ದುದರಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆಯಲ್ಲಿ ಈ ಡಾಂಬರೀಕರಣ ವಿಳಂಬವಾಗಿತ್ತು. ಇದೀಗ ಚತುಷ್ಪತ ಹೆದ್ದಾರಿಯಾಗುವರೆಗೂ ರಸ್ತೆಯನ್ನು ಡಾಂಬರೀಕರಣ ಕೈಗೊಂಡು ಸುಸ್ಥಿತಿಯಲ್ಲಿಡಲಾಗುತ್ತದೆ.

ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ- ಅಭಿವೃದ್ಧಿಯೇ ನನ್ನ ಗುರಿ : ಸಚಿವ ಡಾ.ನಾರಾಯಣಗೌಡ

ಶ್ರೀರಂಗಪಟ್ಟಣ- ಚನ್ನರಾಯಪಟ್ಟಣ ರಸ್ತೆ ಹದಗೆಟ್ಟಿದ್ದರಿಂದ ವಾಹನ ಸವಾರರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡಿದ್ದು 15 ಕೋಟಿ ವೆಚ್ಚದಲ್ಲಿ, ಡಾಂಬರೀಕರಣ ಆರಂಭವಾಗಿದೆ. ಕೆಆರ್ ಪೇಟೆಯ ಸರ್ವಾಂಗೀಣ ಅಭಿವೃದ್ಧಿಗೆ ಪಣ ತೊಟ್ಟಿದ್ದು, ಕೆಲಸವೇ ನನ್ನ ಗುರಿ. ಯಾವುದೇ ರೀತಿಯ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

30 ಲಕ್ಷಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ 23ರ ಹರೆಯದ ಮಿನ್ನು ಮನಿ…!

ಮುಸ್ಲಿಂ ಓಲೈಕೆಗೆ ಮುಂದಾದ ಕೆ.ಎಸ್ ಈಶ್ವರಪ್ಪಾ

ಮಾರ್ಚ್ 31 ರಿಂದ 6ನೇ ಆವೃತ್ತಿಯ ಐಪಿಎಲ್ 2023 ಆರಂಭ

- Advertisement -

Latest Posts

Don't Miss