ಬಿಜೆಪಿಗೆ ಸೇರ್ಪಡೆಯಾದ ಅರಕಲಗೂಡು ಮಾಜಿ ಶಾಸಕ ಎ.ಟಿ ರಾಮಸ್ವಾಮಿ

political news:

ಶುಕ್ರವಾರ ಜೆಡಿಎಸ್ ಗೆ ರಾಜಿನಾಮೆ ನೀಡಿದ ಅರಕಲಗೂಡು ಶಾಸಕ ಎ ಟಿ ರಾಮಸ್ವಾಮಿ ಇವರು ಇಂದು ದೆಹಲಿಗೆ ತೆರಳಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಮ್ಮುಖದಲ್ಲಿ ಕಮಲದ ಪಾಳಯಕ್ಕೆ ಸೇರಿಕೊಂಡಿದ್ದಾರೆ.

ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಅರಕಲಗೂಡು ಶಾಸಕ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಕ್ಷದ ಶಾಲು ಹೊಡಿದ ಸದಸ್ಯತ್ವದ ರಶೀದಿ ನೀಡುವ ಮೂಲಕ ಪಕ್ಷಕ್ಕೆ ಸೇರಿಸಿಕೊಂಡರು.ಇದೇ ವೇಳೆ ಮಾತನಾಡಿದ ಶಾಸಕ ರಾಮಸ್ವಾಮಿ ಅವರು ನಾನು ನನ್ನ ಸ್ವ ಇಚ್ಚೆಯಿಂದ ಪಕ್ಷವನ್ನು ಸೇರಿಕೊಂಡಿದ್ದೇನೆ ಈ ಬದಲಾವಣೆಗೆ ನನಗೆ ಬಹಳ ಸಂತೋಷವಾತ್ತಿದೆ. ಇಂದು ಸಂಜೆ ಅಥವಾ ನಾಳೆ ಮೋದಿ ಮತ್ತು ಅಮಿತ್ ಷಾ ಅವರನ್ನು ಭೇಟಿಯಾಗಲಿದ್ದೇನೆ.ಇಡೀ ವಿಶ್ವದಲ್ಲೇ ಭಾರತ ಪಗ್ರತಿಯಲ್ಲಿ ದಾಪುಗಾಲು ಹಾಕುತ್ತಿದೆ. ಬಿಜೆಪಿ ನಾಯಕರು ಮೌಲ್ಯಗಳನ್ನು ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ಬಿಜೆಪಿ ಸೇರುತ್ತಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದರು.

ಚುನಾವಣೆಯಲ್ಲಿ ಅನಧಿಕೃತ ವೆಚ್ಚ ತಡೆಯಲು ಕಟ್ಟುನಿಟ್ಟಿನ ಕ್ರಮಕ್ಕೆ ಜಾರಿ

ಟಿಕೆಟ್ ಘೋಷಣೆಯಾದರೂ ನಿಲ್ಲದ ಪಕ್ಷ ಬದಲಾವಣೆ ಪರ್ವ

ಗದ್ದಲವನ್ನು ನಿಯಂತ್ರಿಸಲು ಗದರಿಸಿದ ಸಿದ್ದು

About The Author