Monday, December 23, 2024

Latest Posts

ರಾಜಕೀಯ ಸೇರುವ ಕುರಿತು ಸ್ಪಷ್ಟನೆ ಕೊಟ್ಟ ಕಿಚ್ಚ ಸುದೀಪ್

- Advertisement -

ರಾಜಕೀಯ ಸುದ್ದಿ:

ಕನ್ನಡದ ನಟ ಕಿಚ್ಚ ಸುದೀಪ್ ಬಿಜೆಪಿ ಸೇರುವ ಮೂಲಕ ರಾಜಕಾರಣಕ್ಕೆ ಸೇರಲಿದ್ದಾರೆ ಎನ್ನುವ ಸುದ್ದಿ ತುಂಬಾ ಹರಿದಾಡಿತಿತ್ತು . ಅದಕ್ಕಾಗಿ ಮುಖ್ಯಮಂತ್ರಿಗಳ ಜೊತೆ ಸಭೆ ಸುದ್ದಿಗೋಷ್ಟಿ ನಡೆಸಿದ ಕಿಚ್ಚ ಸುದೀಪ್ ಅವರು ನಾನು ರಾಜಕಾರಣಕ್ಕೆ  ಸೇರುವುದಿಲ್ಲ ಅದೇ ರೀತಿ ಪಕ್ಷದ ಪರವಾಗಿಯೂ ಪ್ರಚಾರ ಮಾಡುವುದಿಲ್ಲ . ನಾನು ಕೇವಲ ವ್ಯಕ್ತಿಯ ಪರವಾಗಿ ಪ್ರಚಾರ ಮಾಡಲು ಬಂದಿದ್ದೇನೆ .

ನನಗೆ ಸಿನಿಮಾ ರಂಗದಲ್ಲಿ ಬೀಳುವ ಸಂದರ್ಭದಲ್ಲಿ ನನಗೆ ಬೆನ್ನೆಲುಬಾಗಿ ನಿಂತವರು ಮುಖ್ಯಮಂತ್ರಿಗಳು ಅವರು ನನಗೆ ತಂದೆಯ ಸ್ಥಾನದಲ್ಲಿ ಇದ್ದಾರೆ ನಾನು ಅವರು ಎಲ್ಲಿ ಹೇಳುತ್ತಾರೋ ಅಲ್ಲಿ ಕೆಲಸ ಮಾಡುತ್ತೇನೆ. ಬೊಮ್ಮಾಯಿಯವರ ಬಿಜೆಪಿ ಬಿಟ್ಟು ಬೇರೆ ಪಕ್ಷದಲ್ಲಿದ್ದರೂ ಅವರ ಪರ ಪ್ರಚಾರ ಮಾಡುತ್ತೇನೆ

ನನ್ನ ಲೈಫ್ ನಲ್ಲಿ ಬೊಮ್ಮಾಯಿಯವರು ಒಳ್ಳೆಯ ಸ್ಥಾನದಲ್ಲಿದ್ದಾರೆ. ಅವರು ಎಲ್ಲಿ ಹೇಳುತ್ತಾರೋ ಅಲ್ಲಿ ಕೆಲಸ ಮಾಡಲು ಸಿದ್ಧನಿದ್ದೇನೆ. ತಯಾರಿದ್ದೇನೆ. ನನ್ನ ತಂದೆಯ ಮಾತು ಕೇಳುವ ರೀತಿ ಅವರ ಮಾತು ಕೇಳುತ್ತೇನೆ. ಪಕ್ಷ ಕರೆದಿರೋದು ನನಗೆ ಗೊತ್ತಿಲ್ಲ. ಬೊಮ್ಮಾಯಿ ಬೇರೆ ಪಕ್ಷದಲ್ಲಿದ್ದರೂ ಅವರ ಜೊತೆ ನಾನು‌ ನಿಲ್ಲುತ್ತಿದ್ದೆ. ನಾನು ಸಿಎಂ ಬೊಮ್ಮಾಯಿ ಅವರ ವಿಷಯದಲ್ಲಿ ಪಕ್ಷ ನೋಡುತ್ತಿಲ್ಲ, ವ್ಯಕ್ತಿ ನೋಡುತ್ತೇನೆ ಎಂದರು.

ನನಗೆ ಎಲ್ಲ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಆಗಲ್ಲ. ಪಕ್ಷ ಅಂತಾ ಇಲ್ಲಿಗೆ ಬಂದಿಲ್ಲ, ವ್ಯಕ್ತಿಯ ಕಾಳಜಿಗೆ ಬಂದಿದ್ದೇನೆ.  ಹಣಕ್ಕಾಗಿ ನಾನು ಚುನಾವಣಾ ಪ್ರಚಾರ ಮಾಡುತ್ತಿಲ್ಲ. ಸಿಎಂ ಬೊಮ್ಮಾಯಿ ಅವರಿಗೆ ಮಾತ್ರ ನನ್ನ ಬೆಂಬಲ. ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ನಾನು ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶ ಮಾಡುವುದಿಲ್ಲ. ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುವುದು ಸಾಕಷ್ಟು ಇದೆ ಎಂದು ಹೇಳಿದರು. ಈ ಮೂಲಕ ರಾಜಕೀಯ ಪ್ರವೇಶದ ಕುರಿತು ಹಬ್ಬಿರುವ ವಿಚಾರಕ್ಕೆ ತೆರೆ ಎಳೆದರು.

ಕಡಿತವಾಗಿದೆಯಾ ಭಾರತದ ಆರ್ಥಿಕ ಬೆಳವಣಿಗೆ

ತಮ್ಮನ ಅಕ್ರಮ ಸಂಬಂಧಕ್ಕೆ ಅಣ್ಣನ ಸಜೀವದಹನ

ಬಿಜೆಪಿ ಸೇರಲಿದ್ದಾರಾ ಕಿಚ್ಚ ಸುದೀಪ್…?

- Advertisement -

Latest Posts

Don't Miss