ಕೋಲಾರ : ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡ ಮಾತನಾಡಿದ್ದು, ಎಲೆಕ್ಷನ್ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಅಲ್ಲದೇ ಬಿಜೆಪಿ ವಿರುದ್ಧವೂ ಹರಿಹಾಯ್ದಿದ್ದಾರೆ.
ಮಾಲೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡರು ಏಪ್ರಿಲ್ 17ರಂದು ನಾಮಪತ್ರ ಸಲ್ಲಿಸಲಿದ್ದು, ಸೋಮವಾರ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇನೆ ಎಂದಿದ್ದಾರೆ. ಅಲ್ಲದೇ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ . ಇತಿಹಾಸದಲ್ಲಿ ಎರಡನೇ ಬಾರಿಗೆ ಮಾಲೂರಿನಲ್ಲಿ ಕಾಂಗ್ರೆಸ್ ಬಂದಿಲ್ಲ.
ಆದ್ರೆ ಈ ಬಾರಿ ಸತತ 2ನೇ ಬಾರಿ ಗೆಲ್ಲುವ ಮೂಲಕ ಕಾಂಗ್ರೆಸ್ ಇತಿಹಾಸ ಸೃಷ್ಟಿಸುತ್ತೆ . ಬೇರೆ ಪಕ್ಷದವರು ನನ್ನ ಬಗ್ಗೆ ಮಾತಾಡ್ತಾರೆ ಅಂದ್ರೆ ನಾನು ಸ್ಟ್ರಾಂಗ್ ಇದೀನಿ ಅಂತ ಅರ್ಥ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಕೋಲಾರದ ಎಂಪಿ ರಾಜ್ಯ & ಕೇಂದ್ರದಿಂದ ಎಷ್ಟು ಅನುದಾನ ತಂದಿದ್ದಾರೆ? ಆದ್ರೆ ನಾನು ಕ್ಷೇತ್ರದಲ್ಲಿ ಏನೇನು ಅಭಿವೃದ್ಧಿ ಕೆಲಸ ಮಾಡಿದ್ದೇನೆಂದು ಲೆಕ್ಕ ಕೊಡುತ್ತೇನೆ ಎಂದು ನಂಜೇಗೌಡ, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಇನ್ನು ಕೋಲಾರದಲ್ಲಿ ರಾಹುಲ್ ಗಾಂಧಿ ಕಾರ್ಯಕ್ರಮ ಮತ್ತೆ ಮುಂದೂಡಿಕೆಯಾಗಿದೆ. ಏಪ್ರಿಲ್10ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮ ಏಪ್ರಿಲ್ 16ಕ್ಕೆ ಮುಂದೂಡಿಕೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ನಂಜೇಗೌಡ, ರಾಹುಲ್ ಗಾಂಧಿ ರಾಷ್ಟ್ರೀಯ ನಾಯಕರು ಆಗಿರುವ ಕಾರಣ ಮುಂದೂಡಿಕೆಯಾಗ್ತಿದೆ . ನೆಹರೂ ಕುಟುಂಬದ ರಾಹುಲ್ ಗಾಂಧಿಗೆ ಬಿಜೆಪಿಯವರು ತೊಂದರೆ ಕೊಡ್ತಿದ್ದಾರೆ. ಬಿಜೆಪಿಯವರಿಗೆ ಮುಂದಿನ ದಿನಗಳಲ್ಲಿ ಜನರೇ ತಕ್ಕ ಪಾಠ ಕಲಿಸ್ತಾರೆ ಎಂದು ಮಾಲೂರು ಶಾಸಕ ಕೆ.ವೈ.ನಂಜೇಗೌಡ ಹೇಳಿದ್ದಾರೆ.
‘ಈ ಬಾರಿ ಮಾಲೂರಿನಲ್ಲಿ ಕಾಂಗ್ರೆಸ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸುತ್ತೆ’
ನಾನು ಕೋಲಾರದವನೇ, ಪಾಕಿಸ್ತಾನದಿಂದ ಬಂದವನಲ್ಲ: ಗೋ ಬ್ಯಾಕ್ ಕ್ಯಾಂಪೇನರ್ಸ್‌ಗೆ ನಾಯ್ಕರ್ ಟಾಂಗ್..
ಕೋಲಾರ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ, ಗೋ ಬ್ಯಾಕ್ ವೇಲು ನಾಯ್ಕರ್ ಅಭಿಯಾನ