‘ಸಿದ್ದರಾಮಯ್ಯ ಕೋಲಾರಕ್ಕೆ ಬಂದರೂ ಜೆಡಿಎಸ್ ಪಕ್ಷ ಗೆಲುವು ಸಾಧಿಸುತ್ತದೆ’

ಕೋಲಾರ: ಕೋಲಾರದಲ್ಲಿ ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಸಾಂಕೇತಿಕವಾಗಿ ಇಂದು ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್ ಈ ಬಾರಿ ಕೋಲಾರದಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದಾರೆ.

ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗಿಲ್ಲ. ಕೋಲಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ನೇರ ಹಣಾಹಣಿ ನಡೆಯಲಿದೆ. ಯಾರೇ ಅಭ್ಯರ್ಥಿ ಆದರೂ ಜೆಡಿಎಸ್ ಗೆಲುವು ಸಾಧಿಸಲಿದೆ. ಸಿದ್ದರಾಮಯ್ಯ ಅವರು ಕೋಲಾರಕ್ಕೆ ಬಂದರೂ ಜೆಡಿಎಸ್ ಪಕ್ಷ ಗೆಲುವು ಸಾಧಿಸುತ್ತದೆ. ಮತ್ತೊಮ್ಮೆ ನಾಮಪತ್ರ ಸಲ್ಲಿಸುವಾಗ ಕುಮರಸ್ವಾಮಿ ಅವರನ್ನ ಕರೆತರುವ ಪ್ರಯತ್ನ ಮಾಡಲಾಗುವುದು. ನಮ್ಮ ಜೆಡಿಎಸ್ ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ . ಇದ್ದರೂ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುತ್ತೇವೆ ಎಂದು ಶ್ರೀನಾಥ್ ಹೇಳಿದ್ದಾರೆ.

ಬಿಜೆಪಿಗೆ ಸೆಡ್ಡು ಹೊಡೆದ ಹೂಡಿ: ಪಕ್ಷೇತರವಾಗಿ ನಿಂತು ನಾಮಪತ್ರ ಸಲ್ಲಿಕೆ.

‘ಅನುಮಾನ ಇದ್ದರೆ ಈಗಲೇ ಇವಿಯಂ ಮೆಷಿನ್ ಪರಿಶೀಲನೆ ಮಾಡಿಕೊಳ್ಳಿ’

‘ರೇವಣ್ಣ ಒಂದು ಶಕ್ತಿ, ಅವರಿಂದಲೇ ಜೆಡಿಎಸ್ ಅಭ್ಯರ್ಥಿ ಗೆಲ್ಲುತ್ತಿದ್ದರು’

About The Author