- Advertisement -
ಬೆಂಗಳೂರು: ಬಿಜೆಪಿ ಮುಖಂಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಮವಾರ ಸೇರ್ಪಡೆಯಾದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.
- Advertisement -