‘ನಾವು ಕರ್ನಾಟಕದ ಜನತೆಯ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ’

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ತೀರ್ಪು ಬಂದಿದ್ದು, ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆದು ಗೆಲುವಿನ ಜಯಭೇರಿ ಬಾರಿಸಿದೆ. ಹೀಗಾಗಿ ಬಿಜೆಪಿ ಸರ್ಕಾರದ ಅವಧಿ ಮುಗಿದಿದ್ದು, ಇಂದು ಬಸವರಾಜ ಬೊಮ್ಮಾಯಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿದ್ದಾರೆ.

ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಬೊಮ್ಮಾಯಿ, ಈ ರಾಜ್ಯದ ಸಿಎಂ ಆಗಿದ್ದ ನಾನು, ಬಿಜೆಪಿ ಸೋಲಿನ ಸಂಪೂರ್ಣ ಹೊಣೆಯನ್ನ ನಾನೇ ಹೊತ್ತುಕೊಳ್ಳುತ್ತೇನೆ. ಈ ಸೋಲಿಗೆ ಸುಮಾರು ಕಾರಣಗಳಿದೆ. ಎಲ್ಲವನ್ನೂ ಸರಿಪಡಿಸಿಕೊಳ್ಳುತ್ತೇನೆ. ನಮ್ಮ ತಪ್ಪುಗಳನ್ನು ವಿಶ್ಲೇಷಿಸಿಕೊಳ್ಳುತ್ತೇನೆ ಎಂದು ಹೇಳಿದ್ದರು.

ಇದೀಗ ಈ ಬಗ್ಗೆ ಟ್ವೀಟ್ ಮಾಡಿದ್ದು, ನಾವು ಕರ್ನಾಟಕದ ಜನತೆಯ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ನಾವು ನಮ್ಮ ತಪ್ಪುಗಳನ್ನು ವಿಶ್ಲೇಷಿಸಿ, ಸರಿಪಡಿಸಿಕೊಂಡು, ಪಕ್ಷವನ್ನು ಪುನಃ ಸಂಘಟಿಸಿ, ಸಂಸತ್ ಚುನಾವಣೆಯ ವೇಳೆಯಲ್ಲಿ ಮತ್ತೊಮ್ಮೆ ಪುನರಾಗಮಿಸುತ್ತೇವೆ ಎಂದು ಹೇಳಿದ್ದಾರೆ.

ಹಾಸನ ಜಿಲ್ಲೆಯ ಏಳೂ ವಿಧಾನಸಭಾ ಕ್ಷೇತ್ರದ ಅಂತಿಮ ಫಲಿತಾಂಶದ ವಿವರ

ಕಾಂಗ್ರೆಸ್ ಗೆಲುವಿನ ಬಗ್ಗೆ ಮಾತನಾಡುತ್ತ, ಭಾವುಕರಾದ ಡಿಕೆಶಿ..

‘ಇದು ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದದ ವಿರುದ್ಧದ ಫಲಿತಾಂಶ’

About The Author