ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಿದ್ದಕ್ಕೆ ಅಭಿನಂದನೆ ತಿಳಿಸಿದ ಪ್ರಧಾನಿ ಮೋದಿ..

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದಕ್ಕೆ, ಕಾಂಗ್ರೆಸ್ಸಿಗೆ ಅಭಿನಂದನೆ ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಅವರಿಗೆ ನನ್ನ ಶುಭಾಶಯಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ..

ಕರ್ನಾಟಕ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಬಿಜೆಪಿ ಕಾರ್ಯಕರ್ತರ ಶ್ರಮವನ್ನು ನಾನು ಪ್ರಶಂಸಿಸುತ್ತೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹುರುಪಿನಿಂದ ಕರ್ನಾಟಕಕ್ಕೆ ಸೇವೆ ಸಲ್ಲಿಸುತ್ತೇವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಬಹುಮತ ಸಾಧಿಸಲು 113 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕಿತ್ತು. ಆದರೆ ಕಾಂಗ್ರೆಸ್ 120ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದಿದೆ. ನಾಳೆ ಬೆಂಗಳೂರಿನಲ್ಲಿ ಶಾಸಕಾಂಗ ಸಭೆ ನಡೆಯಲಿದ್ದು, ಮುಂದಿನ ತಯಾರಿ ಬಗ್ಗೆ ಚರ್ಚೆ ನಡೆಸಲಾಗುತ್ತದೆ.

‘ನಾವು ಕರ್ನಾಟಕದ ಜನತೆಯ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ’

‘ಕರ್ನಾಟಕದಲ್ಲಿ ನಾವು ಪ್ರೀತಿಯಿಂದಲೇ ದ್ವೇಷವನ್ನು ಕಿತ್ತು ಹಾಕಿದ್ದೇವೆ’

ಕಾಂಗ್ರೆಸ್ ಗೆಲುವಿನ ಬಗ್ಗೆ ಮಾತನಾಡುತ್ತ, ಭಾವುಕರಾದ ಡಿಕೆಶಿ..

About The Author