ಮೋದಿ ರೋಡ್ ಶೋ ನಡೆಸಿದ ರಸ್ತೆಯನ್ನು ಸಗಣಿ ನೀರಿನಿಂದ ಸ್ವಚ್ಛ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು

ಮೈಸೂರು: ಕರ್ನಾಟಕ ವಿಧಾನ ಸಭೆ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ರೋಡ್ ಶೋ ಮಾಡಿದ್ದ ರಸ್ತೆಗೆ, ಕಾಂಗ್ರೆಸ್ ಕಾರ್ಯಕರ್ತರು ಸಗಣಿ ಹಾಕಿ ಸ್ವಚ್ಛ ಮಾಡಿ ವ್ಯಂಗ್ಯ ಮಾಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ, ಮೈಸೂರಿನ ರಾಜಮಾರ್ಗದಲ್ಲಿ ಮೋದಿ ರೋಡ್ ಶೋ ಮಾಡಿದ್ದರು. ಆದರೆ ಇಲ್ಲಿ ಜಂಬೂ ಸವಾರಿ ಬಿಟ್ಟರೆ, ಬೇರೆ ಯಾವ ಮೆರವಣಿಗೆ ಕೂಡ ನಡೆದಿಲ್ಲ. ಆದರೆ ಈ ರಸ್ತೆಯಲ್ಲಿ ಮೋದಿ ರೋಡ್ ಶೋ ನಡೆಸಿ, ರಾಜ ಮನೆತನದವರಿಗೆ ಅಪಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ.

ಅಲ್ಲದೇ, ಹಿಂದುತ್ವದ ಹೆಸರು ಹೇಳಿಕೊಂಡು, ರೋಡ್ ಶೋ ಮಾಡಿದ ಮೋದಿಗೆ, ರಾಜ್ಯದ ಜನರು ತಕ್ಕ ಪಾಠ ಕಲಿಸಿದ್ದಾರೆ. ಹಾಗಾಗಿ ಅವರು ನಡೆದ ದಾರಿಯನ್ನು ಸಗಣಿ ಹಾಕಿ, ತೊಳೆಯುವುದರ ಮೂಲಕ ನಾವು ಶುದ್ಧ ಮಾಡಿದ್ದೇವೆ ಎಂದು ಕಾಂಗ್ರೆಸ್ ಕಾರ್ಯಕರ್ತರು ವ್ಯಂಗ್ಯವಾಡಿದ್ದಾರೆ.

‘ಅಮ್ಮ ಅನ್ನೋದು ಕೇವಲ ಪದವಲ್ಲ. ಅದೊಂದು ಪರಿಪೂರ್ಣ ಅನುಭೂತಿ ‘

‘ದ್ವೇಶ, ಬೂಟಾಟಿಕೆಯನ್ನು ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ಧನ್ಯವಾದಗಳು, ಬೆತ್ತಲೆಯಾದ ಚಕ್ರವರ್ತಿ’

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಸವರಾಜ ಬೊಮ್ಮಾಯಿ

About The Author