Monday, December 23, 2024

Latest Posts

ರಾಧಿಕಾ ಕುಮಾರಸ್ವಾಮಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸಪ್ತಭಾಷೆಯ “ಅಜಾಗ್ರತ” ಚಿತ್ರ ಆರಂಭ..

- Advertisement -

ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ “ಅಜಾಗ್ರತ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ರವಿರಾಜ್ ನಿರ್ಮಿಸುತ್ತಿದ್ದಾರೆ. ಎಂ.ಶಶಿಧರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಏಳು ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ಡಬ್ ಮಾಡದೆ, ಆಯಾ ಭಾಷೆಗಳಲ್ಲಿ ಪ್ರತ್ಯೇಕವಾಗಿ ಚಿತ್ರೀಕರಣ ನಡೆಯಲಿರುವುದು ಈ ಚಿತ್ರದ ವಿಶೇಷ .

ಬಹಳ ವರ್ಷಗಳ ನಂತರ ಕುನಾಲ್ ಗಾಂಜವಾಲ ಕಂಠಸಿರಿಯಲ್ಲಿ ಮೂಡಿಬಂದಿದೆ ‘ರಿಚ್ಚಿ’ ಹಾಡು..

ಬಟ್ಟೆ ಸರಿ ಹಾಕಿಕೊಳ್ಳದಿದ್ದರೂ, ಮಾನವೀಯತೆ ಮೆರೆದ ನಟಿಗೆ ಎಲ್ಲರಿಂದ ಶ್ಲಾಘನೆ..

‘ದ್ವೇಶ, ಬೂಟಾಟಿಕೆಯನ್ನು ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ಧನ್ಯವಾದಗಳು, ಬೆತ್ತಲೆಯಾದ ಚಕ್ರವರ್ತಿ’

- Advertisement -

Latest Posts

Don't Miss